• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಭೂಮಿ ಸತ್ಯಾಗ್ರಹ: ದೇವನಹಳ್ಳಿ ರೈತ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ಬೆಂಬಲ!

ರೈತರ ಕೃಷಿ ಭೂಮಿಯನ್ನು ರಿಯಲ್ ಎಸ್ಟೇಟ್ ಧಂಧೆಕೋರರು, ಕಾರ್ಪೋರೇಟ್ ಕಂಪನಿಗಳಿಗೆ ಮಾರಾಟ ಮಾಡಲು ಸರ್ಕಾರ ಹುನ್ನಾರ.

by Dynamic Leader
03/07/2025
in ಬೆಂಗಳೂರು
0
ರೈತರ ಫಲವತ್ತಾದ ಭೂಮಿಯನ್ನು ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುವ ಕ್ರಮವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಹಾಗೂ ವಕೀಲರೂ ಆದ ತಾಹೇರ್ ಹುಸೇನ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
0
SHARES
26
VIEWS
Share on FacebookShare on Twitter

ಬೆಂಗಳೂರು: ನುಡಿದಂತೆ ನಡೆದಿದ್ದೇವೆ ಎಂದು ಹೇಳಿಕೊಂಡೇ ರೈತರಿಗೆ ಅನ್ಯಾಯ ಮಾಡುತ್ತಿರುವುದು ಅತ್ಯಂತ ಖಂಡನಿಯ. ರೈತರ ಫಲವತ್ತಾದ ಭೂಮಿಯನ್ನು ಬಲವಂತದಿಂದ ಭೂಸ್ವಾಧೀನ ಮಾಡಿಕೊಳ್ಳುವ ಕ್ರಮವನ್ನು ಸರ್ಕಾರ ಈ ಕೂಡಲೇ ಕೈಬಿಡಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ಹಾಗೂ ವಕೀಲರೂ ಆದ ತಾಹೇರ್ ಹುಸೇನ್  ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಿವಿಧ ಸಂಘಟನೆಗಳು, ಪ್ರಗತಿಪರ ಚಿಂತಕರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ‘ಭೂಮಿ ಸತ್ಯಾಗ್ರಹ’ ಹೋರಾಟಕ್ಕೆ ವೆಲ್ಫೇರ್ ಪಾರ್ಟಿ ವತಿಯಿಂದ ಬೆಂಬಲ ಸೂಚಿಸುತ್ತ ಅವರು ಮಾತನಾಡಿದರು, “ಈ ಹಿಂದೆ ಬಿಜೆಪಿ ಸರ್ಕಾರ ದೇವನಹಳ್ಳಿ ವ್ಯಾಪ್ತಿಯ ರೈತರ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದಾಗ ರೈತ ಹೋರಾಟ ಆರಂಭವಾಗಿತ್ತು. ಪ್ರತಿಭಟನೆ ನಿರತ ರೈತರನ್ನು ಭೇಟಿ ಮಾಡಿದ ಅಂದಿನ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಭೂಸ್ವಾಧೀನ ಪ್ರಕ್ರಿಯೆ ಕೈ ಬಿಡುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಅಧಿಕಾರಕ್ಕೆ ಎರಡೂವರೆ ವರ್ಷ ಪೂರೈಸಿದರೂ ಭರವಸೆ ಈಡೇರಿಸಿಲ್ಲ. ಇದರ ನಡುವೆ ಭೂ ಸ್ವಾಧೀನಕ್ಕೆ ಮುಂದಾಗಿರುವುದು ಖಂಡನೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ರೈತರ ಹೋರಾಟದ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲವೇ? ಈ ಸರ್ಕಾರಕ್ಕೆ ಕಿವಿಯಿದ್ದು.. ಕಿವುಡರಂತೆ, ಕಣ್ಣಿದ್ದು.. ಕುರುಡರಂತೆ ವರ್ತಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮ ಭೂಮಿ, ನಮ್ಮ ಹಕ್ಕು ಅಲ್ಲವೇ. ಸರ್ಕಾರದ ಕೈಗಾರಿಕಾ ನೀತಿ ಬದಲಾಗಬೇಕು. ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರು, ನಮಗೆ ಪರ್ಯಾಯವಾಗಿ ಭೂಮಿ ಕೊಡಿ ಎಂದು ಅರ್ಜಿ ಸಲ್ಲಿಸಿದರೂ ಇದುವರೆಗೂ ಭೂಮಿ ಹಂಚಿಕೆ ಮಾಡಿಲ್ಲ. ಸರ್ಕಾರಗಳು ಕಾರ್ಪೊರೇಟ್ ಕಂಪನಿಗಳ ಏಜೆಂಟರಂತೆ ವರ್ತನೆ ಮಾಡುತ್ತಿರುವುದು ಸೂಕ್ತವಲ್ಲ” ಎಂಉ ಕಿಡಿಕಾರಿದರು.

“ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1,777 ಎಕರೆ ಜಮೀನನ್ನು ಸರ್ಕಾರ ಭೂಸ್ವಾಧೀನ ಮಾಡಲು ಮುಂದಾಗಿದೆ. ಭೂಸ್ವಾಧೀನದ ಪ್ರಕ್ರಿಯೆ ವಿರುದ್ಧ ರೈತರು 1,184  ದಿನ ಶಾಂತಿಯುತವಾಗಿ ಹೋರಾಟ ಮಾಡಿದ್ದಾರೆ. ದೇಶಕ್ಕೆ ಅನ್ನ ನೀಡುವ ರೈತರ ಸಮಸ್ಯೆ ಪರಿಹಾರಕ್ಕೆ ಮುಂದಾಗದ ಸರ್ಕಾರವು, ಕೃಷಿ ಭೂಮಿಯನ್ನು ರಿಯಲ್ ಎಸ್ಟೇಟ್ ಧಂಧೆಕೋರರು, ಕಾರ್ಪೋರೇಟ್ ಕಂಪನಿಗಳಿಗೆ ಮಾರಾಟ ಮಾಡಲು ಹುನ್ನಾರ ಮಾಡಿದೆ. ಕೃಷಿ ಭೂಮಿಯನ್ನು ಕಳೆದುಕೊಂಡರೆ, ರೈತರ ಪರಿಸ್ಥಿತಿ ಏನು”? ಎಂದು ಪ್ರಶ್ನಿಸಿದರು.

“ಕೃಷಿ ಆಧಾರಿತ ಕೈಗಾರಿಕೆಗಳು ಆರಂಭವಾಗುತ್ತಿಲ್ಲ. ಸ್ಥಳೀಯರಿಗೆ ಉದ್ಯೋಗ ನೀಡುವ ಬಗ್ಗೆ ಮಾತಿಲ್ಲ. ಭೂಮಿ ನೀಡಿದ ರೈತರಿಗೆ ಪರ್ಯಾಯವಾಗಿ ಭೂಮಿ ನೀಡುವ ಬಗ್ಗೆ ಮಾತಾಡದೇ, ಏಕಾಏಕಿ ರೈತರ ಭೂಮಿಗಳನ್ನು ಸ್ವಾಧೀನ ಮಾಡಿಕೊಳ್ಳಲು ಬಿಡುವುದಿಲ್ಲ” ಎಂದು ತಿಳಿಸಿದರು.

Tags: Bhoomi SatyagrahaTaher HussainWelfare Partyಕೃಷಿ ಭೂಮಿಫ್ರೀಡಂ ಪಾರ್ಕ್ಭೂಮಿ ಸತ್ಯಾಗ್ರಹರೈತ ಹೋರಾಟವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ
Previous Post

CHATGPT ಅನ್ನು ಸಂಪೂರ್ಣವಾಗಿ ನಂಬಬೇಡಿ: OPENAI ಅಧ್ಯಕ್ಷ Sam Altman ಬಳಕೆದಾರರಿಗೆ ಎಚ್ಚರಿಕೆ!

Next Post

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

Next Post
ಪತಂಜಲಿ ಸಂಸ್ಥೆಯು ಡಾಬರ್ ಉತ್ಪನ್ನದ ವಿರುದ್ಧ ಜಾಹೀರಾತನ್ನು ಬಿಡುಗಡೆ ಮಾಡಿದೆ. ಈ ಜಾಹೀರಾತಿನ ವಿರುದ್ಧ ಡಾಬರ್ ಸಂಸ್ಥೆ ದೆಹಲಿ ಹೈಕೋರ್ಟ್ನಲ್ಲಿ ಮೊಕದ್ದಮೆ ಹೂಡಿತು.

ದೆಹಲಿ ಹೈಕೋರ್ಟ್: ಬಾಬಾ ರಾಮದೇವ್ ಅವರ ಪತಂಜಲಿ ಜಾಹೀರಾತಿಗೆ ನಿಷೇಧ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS