• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಧರ್ಮರಾಯನಂತೆ ಆಸ್ತಿ-ಅಧಿಕಾರಕ್ಕಾಗಿ ದ್ರೌಪದಿಯನ್ನೇ ಜೂಜಿನಲ್ಲಿಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಂತೂ ಇಲ್ಲ: ಬಿ.ಕೆ.ಹರಿಪ್ರಸಾದ್!

ಬಿಜೆಪಿ ಪಕ್ಷದ ಶಿಸ್ತು-ಸಂಸ್ಕಾರದ ಬಗ್ಗೆ ಮಾತಾಡಲು ಪದಗಳು ಸಾಲದು. ನಿಘಂಟು, ಗ್ರಂಥಾಲಯಗಳನ್ನೇ ಸಂಶೋಧಿಸಬೇಕು.

by Dynamic Leader
10/07/2025
in ರಾಜಕೀಯ
0
ನಾನು ಕ್ಷಮೆ ಕೇಳುವುದು ನಂತರದ್ದೂ, ಮೊದಲು ಪೋಕ್ಸೋ ಕೇಸಿನಲ್ಲಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ತಂದೆಯವರ ಕ್ಷಮೆ ಕೇಳಿಸಿ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.
0
SHARES
49
VIEWS
Share on FacebookShare on Twitter

ಬೆಂಗಳೂರು: ನಾನು ಕ್ಷಮೆ‌ ಕೇಳುವುದು ನಂತರದ್ದೂ, ಮೊದಲು ಪೋಕ್ಸೋ ಕೇಸಿನಲ್ಲಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ತಂದೆಯವರ ಕ್ಷಮೆ ಕೇಳಿಸಿ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

ಬಿಜೆಪಿಯಲ್ಲಿ ಕಾರ್ಯಕರ್ತ ಸ್ಥಾನವೇ ಮುಖ್ಯ ಎನ್ನುವುದಾದರೇ ಪೇಮೆಂಟ್ ಸೀಟ್ ಪಡೆದು ರಾಜ್ಯಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡಿದ್ದು ಯಾಕೆ ವಿಜಯೇಂದ್ರ ಅವರೇ.. ಗಲಿಬಿಲಿಯಾಗಬೇಡಿ ಇದು ನಾನು ಮಾಡುತ್ತಿರುವ ಆರೋಪವಲ್ಲ, ನಿಮ್ಮದೇ ಪಕ್ಷದ ನಾಯಕರು ಕೊಡುತ್ತಿರುವ ಬಿರುದು-ಬಾವಲಿಗಳು ಎಂದು ಹೇಳಿದ್ದಾರೆ.

ನಾನು ಹಿಂಬಾಗಿಲಿನಿಂದ ವಿಧಾನಸಭೆಗೆ ಪ್ರವೇಶ ಮಾಡಿದ್ದು ನಿಜವೇ ಆಗಿದ್ದರೇ ನಿಮ್ಮ ತಂದೆ ಬಿ.ಎಸ್.ಯಡಿಯೂರಪ್ಪನವರು ಶಿಕಾರಿಪುರದಲ್ಲಿ ಸೋತು ಸುಣ್ಣವಾಗಿ 2000 ರಿಂದ 2004 ರವರೆಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದದ್ದು ಹಿಂಬಾಗಿಲಿನಿಂದಲೊ ಅಥವಾ “ಶೋಭಾ”ಯಾತ್ರೆ ಮೂಲಕವೂ ರಾಜ್ಯದ ಜನರಿಗೆ ತಿಳಿಸಿ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಪಕ್ಷದ ಶಿಸ್ತು-ಸಂಸ್ಕಾರದ ಬಗ್ಗೆ ಮಾತಾಡಲು ಪದಗಳು ಸಾಲದು. ನಿಘಂಟು, ಗ್ರಂಥಾಲಯಗಳನ್ನೇ ಸಂಶೋಧಿಸಬೇಕು. ನಿಮ್ಮ ಪಕ್ಷದ ಶಿಸ್ತು-ನಿಮ್ಮ ಕುಟುಂಬದ ತ್ಯಾಗ ಬಲಿದಾನ, ಹೊಂದಾಣಿಕೆ ರಾಜಕೀಯದ ಬಗ್ಗೆ ಇತ್ತೀಚಿಗೆ ದಾವಣಗೆರೆಯಲ್ಲಿ ಕೇಂದ್ರದ ಮಾಜಿ ಸಚಿವ ಜಿ.ಎಂ.ಸಿದ್ದೇಶ್ವರ ಜನ್ಮದಿನದ ಕಾರ್ಯಕ್ರಮದಲ್ಲಿ ನಿಮ್ಮ ಪಕ್ಷದ ಅತಿರಥ ಮಹಾರಥರು ಹಾಡಿ ಹೊಗಳಿದ್ದಾರೆ; ಸಾಧ್ಯವಾದ್ರೆ ಕೇಳಿ ಎಂದು ವ್ಯಂಗ್ಯವಾಡಿದ್ದಾರೆ.

ಮಹಾಭಾರತದ ಕತೆಗಳನ್ನು ಹೇಳಿ ಕೈಗೆ ದೊಣ್ಣೆ ಕೊಟ್ಟು ಬಡಿಸಿಕೊಳ್ಳಬೇಡಿ. ಧರ್ಮರಾಯನಂತೆ ಆಸ್ತಿ-ಅಧಿಕಾರಕ್ಕಾಗಿ ದ್ರೌಪದಿಯನ್ನೇ ಜೂಜಿನಲ್ಲಿಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಂತೂ ಇಲ್ಲ, ನಿಮಿಗೂ ಅಂತಹ ದಾರಿದ್ರ್ಯ ಬರದೇ ಇರಲಿ. ಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ಅಧ್ಯಕ್ಷೆಯನ್ನಾಗಿಯೂ, ದೇಶದ ಮೊದಲ ಪ್ರಜೆಯಾಗಿಯೂ ನೀಡಿದ ಪರಂಪರೆ ಇದೆ. ಇತಿಹಾಸವೇ ಗೊತ್ತಿಲ್ಲದೇ ಎಳಸು ರಾಜಕಾರಣಿ ಎಂದು ಸಾಬೀತು ಪಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ.

ಅಷ್ಟಕ್ಕೂ ಮಹಿಳೆಯರ ಬಗ್ಗೆ ಬೊಗಳೆ ಮಾತಾಡುತ್ತಾ ಅನಗತ್ಯ ಮಾನ ಹರಾಜು ಮಾಡಿಕೊಳ್ಳಬೇಡಿ. ನಿಮ್ಮ ಪಕ್ಷದ ನಾಯಕರು ಜನಪ್ರತಿನಿಧಿಗಳು ಮಹಿಳಾ ರಾಜಕಾರಣಿಗಳನ್ನು, ಉನ್ನತ ಅಧಿಕಾರಿಗಳಿಗೆ ನೀಡಿದ ಗೌರವ ರಾಜ್ಯದ ಜನರು ನೋಡಿದ್ದಾರೆ. ನಾನು ಕ್ಷಮೆ‌ ಕೇಳುವುದು ನಂತರದ್ದೂ, ಮೊದಲು ಪೋಕ್ಸೋ ಕೇಸಿನಲ್ಲಿ ಜಾಮೀನಿನ ಮೇಲೆ ಹೊರಗಿರುವ ನಿಮ್ಮ ತಂದೆಯವರ ಕ್ಷಮೆ ಕೇಳಿಸಿ ಪಾಪ ಪ್ರಾಯಶ್ಚಿತ್ತ ಮಾಡಿಕೊಳ್ಳಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಖಾರವಾಗಿ ಉತ್ತರಿಸಿದ್ದಾರೆ.

Tags: B.K.HariprasadB.Y.Vijayendraಬಿ.ಕೆ.ಹರಿಪ್ರಸಾದ್ಬಿ.ವೈ.ವಿಜಯೇಂದ್ರ
Previous Post

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡದ ಮಾಜಿ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಪತ್ರ!

Next Post

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧ: ಸಿದ್ದರಾಮಯ್ಯ

Next Post
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧ: ಸಿದ್ದರಾಮಯ್ಯ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS