• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರ ಜೊತೆಗೆ ಬರುತ್ತೀರಿ, ಇದು ಕೆಟ್ಟ ನಡವಳಿಕೆ.

by Dynamic Leader
10/11/2025
in ರಾಜಕೀಯ
0
0
SHARES
17
VIEWS
Share on FacebookShare on Twitter

ಮೈಸೂರು: ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

‘ಜನರನ್ನು ಅವರ ಕೆಲಸಗಳಿಗಾಗಿ ಅನಗತ್ಯ ಅಲೆದಾಡಿಸುವುದನ್ನು ನಾನು ಸಹಿಸಲ್ಲ. ಇದು ಅಕ್ಷಮ್ಯ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜನ ಸೇವೆಯ ಪ್ರಮಾಣ ಮಾಡಿ ಹುದ್ದೆ ಸ್ವೀಕರಿಸಿದ್ದೀರಿ. ಜನರನ್ನು ಅಲೆದಾಡಿಸಬಾರದು. ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಬರುವವರು, ಅಧಿಕಾರಿಗಳು ಶಾಶ್ವತವಾಗಿ ಇರುವವರು ಎನ್ನುವ ಭಾವನೆ ಬಿಟ್ಟು ಕೆಲಸ ಮಾಡಬೇಕು’ ಎಂದು ಹೇಳಿದರು.

‘ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲೇ ಏಕೆ ಇರಬೇಕು. ತಾಲ್ಲೂಕುಗಳಲ್ಲಿ ನೆಲೆಸಿ ಜನರ ಸಮಸ್ಯೆ ಕೇಳಬೇಕು ಎನ್ನುವ ಸೂಚನೆ ನೀಡಿದ್ದೆ. ಇದನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವರದಿ ನೀಡಬೇಕು’ ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರಿಗೆ ಸೂಚಿಸಿದರು.  

‘ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳನೇ ಸ್ಥಾನದಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದು ಇಲ್ಲಿನ ಶಿಕ್ಷಣ ವ್ಯವಸ್ಥೆಯ ಗುಣಮಟ್ಟ ಹೇಗಿದೆ ಎಂಬುದನ್ನು ತೋರಿಸುತ್ತದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ವರ್ಗಾವಣೆಗೆ ಅಧಿಕಾರಿ ಮತ್ತು ಸಿಬ್ಬಂದಿ ನಮಗೆ ಹತ್ತಿರದ ಕಾರ್ಯಕರ್ತರ ಜೊತೆಗೆ ಬರುತ್ತೀರಿ, ಇದು ಕೆಟ್ಟ ನಡವಳಿಕೆ. ಮತ್ತೆ ಇಂಥ ನಡವಳಿಕೆ ಪುನರಾವರ್ತನೆ ಆಗಬಾರದು’ ಕಿಡಿಕಾರಿದರು.

‘ಐತಿಹಾಸಿಕ ದಸರಾ ಹಬ್ಬವನ್ನು ಅತ್ಯಂತ ಅರ್ಥಪೂರ್ಣವಾಗಿ ಯಶಸ್ವಿಗೊಳಿಸಿದ್ದಕ್ಕಾಗಿ ಜಿಲ್ಲಾಡಳಿತದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳು’ ಹೇಳಿದರು.

ಮೈಸೂರು ಅಭಿವೃದ್ಧಿಯ ವೇಗ ಹೆಚ್ಚಾಗಬೇಕು. ನಿಗದಿತ ಅವಧಿಯ ಒಳಗೆ ಕೆಲಸಗಳು ಪೂರ್ಣಗೊಳ್ಳಬೇಕು ಎನ್ನುವ ಸೂಚನೆಯನ್ನು ಹಿಂದಿನ ಕೆಡಿಪಿ ಸಭೆಯಲ್ಲಿ ನೀಡಿದ್ದೆ. ಆದರೂ ಈ ಬಗ್ಗೆ ಸಮಾಧಾನ ಆಗುವ ಮಟ್ಟಿಗೆ ವೇಗ ಪಡೆದುಕೊಂಡಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಜಿಲ್ಲೆಯ ಅಭಿವೃದ್ಧಿ ಜೊತೆಗೆ ಮೈಸೂರು ಜನತೆಯ ಸಮಸ್ಯೆಗಳನ್ನು ಆಲಿಸುವ ಮತ್ತು ಪರಿಹಾರ ಒದಗಿಸುವ ಕೆಲಸವೂ ಆಗಬೇಕು’ ಎಂದು ಹೇಳಿದರು.

‘ಮೈಸೂರಿನ ಜನತೆ ನನ್ನನ್ನು ಹುಡುಕಿಕೊಂಡು ಬೆಂಗಳೂರಿಗೆ ಬರುತ್ತಾರೆ. ನಾನು ಬೆಂಗಳೂರಿನಲ್ಲಿ ಇಲ್ಲದಿದ್ದರೆ ರಾತ್ರಿವರೆಗೂ ನನಗಾಗಿ ಕಾಯುತ್ತಾ ಇರುತ್ತಾರೆ. ಇವರಲ್ಲಿ ವೈಯುಕ್ತಿಕ ಸಮಸ್ಯೆಗಾಗಿ ಬರುವವರು ಕಡಿಮೆ. ಕಂದಾಯ ಇಲಾಖೆಗಳ ಸಮಸ್ಯೆಗಳಿಗಾಗಿ ಬರುವವರೇ ಹೆಚ್ಚು. ಮೈಸೂರಿನಲ್ಲೇ ಅವರ ಕೆಲಸಗಳು ಆಗಿದ್ದರೆ, ಮೈಸೂರಿನ ಕಚೇರಿಗಳಲ್ಲೇ ಕುಳಿತು ಅಧಿಕಾರಿಗಳು ಜನರ ಅಹವಾಲು ಕೇಳಿದ್ದರೆ, ಕೇಳಿ ಬಗೆಹರಿಸಿದ್ದರೆ ಅವರು ಮೈಸೂರಿನಿಂದ ಬೆಂಗಳೂರಿನವರೆಗೂ ಹುಡುಕಿಕೊಂಡು ಬರುವ ಅಗತ್ಯ ಇರುತ್ತಿರಲಿಲ್ಲ. “ಜನರನ್ನು ಅಲೆದಾಡಿಸುವುದು ಅಕ್ಷಮ್ಯ. ಇದನ್ನು ನಾನು ಸಹಿಸಲ್ಲ’ ಎಂದು ಕಂದಾಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ಸಿಇಒ ಮತ್ತು ಇತರೆ ಅಧಿಕಾರಿಗಳು ಆಸ್ಪತ್ರೆ, ಶಾಲೆ, ಹಾಸ್ಟೆಲ್‌ ಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎನ್ನುವ ಹಿಂದೆ ನೀಡಿದ್ದ ಸೂಚನೆ ಪಾಲನೆ ಆಗುತ್ತಿಲ್ಲ. ಇನ್ಸ್‌ಪೆಕ್ಟರ್‌ಗಳು, ಪಿಡಿಒಗಳು, ವಿಎ ಗಳ ಮೇಲೆ ಈ ಬಗ್ಗೆ ಸಿಕ್ಕಾಪಟ್ಟೆ ದೂರುಗಳು ಬರುತ್ತಿವೆ. ಜಿಲ್ಲಾಧಿಕಾರಿಗಳು ತಹಶೀಲ್ದಾರ್‌ ಕಚೇರಿಗಳಿಗೆ ಗೌಪ್ಯ ಭೇಟಿ ನೀಡಿದರೆ ಕೆಲಸ ಕದಿಯುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಿಕ್ಕಿ ಬೀಳುತ್ತಾರೆ. ಇಲ್ಲಿಯವರೆಗೂ ಯಾರ ವಿರುದ್ಧವೂ ದೂರು ಬಂದಿಲ್ಲ, ವರದಿ ಬಂದಿಲ್ಲ’ ಎಂದು ಹೇಳಿದರು.

‘ಹಾಸ್ಟೆಲ್‌ಗಳಲ್ಲಿ ಊಟದ ವ್ಯವಸ್ಥೆಯನ್ನು ನಿರಂತರವಾಗಿ ಪರಿಶೀಲನೆ ನಡೆಸಬೇಕು. ಜಿಲ್ಲೆಗೆ ಹೊಸದಾಗಿ ಡಿಡಿಪಿಐ ಬಂದಿದ್ದಾರೆ. ಈ ಅವಧಿಯಲ್ಲಿ ಉತ್ತಮ ಫಲಿತಾಂಶ ಬರಬೇಕು. ನಾನು ಗಮನಿಸುತ್ತಾ ಇರುತ್ತೇನೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಫಲಿತಾಂಶ ಉತ್ತಮವಾಗಿರಬೇಕು, ಇದಕ್ಕೆ ಏನು ಮಾಡಬೇಕು ಎನ್ನುವ ಬ್ಲೂಪ್ರಿಂಟ್‌ ಸಿದ್ದಪಡಿಸಿಕೊಳ್ಳಿ’ ಎಂದು ಸೂಚಿಸಿದರು.

‘ಮೈಸೂರು ಶಿಕ್ಷಣಕ್ಕೆ ಮೊದಲಿನಿಂದಲೂ ಅತ್ಯಂತ ಪ್ರಾಮುಖ್ಯತೆ ನೀಡಿದ್ದ ಸಂಸ್ಥಾನ. ಶಿಕ್ಷಣ ಸೂಚ್ಯಂಕದಲ್ಲಿ ಮೈಸೂರು ಜಿಲ್ಲೆ ಏಳರಿಂದ ಹದಿನಾಲ್ಕನೇ ಸ್ಥಾನಕ್ಕೆ ಕುಸಿದಿರುವುದು ಸರಿಯಲ್ಲ’ ಎಂದು ಆತಂಕ ವ್ಯಕ್ತಪ್ಡಿಸಿದರು.

‘ಇಂದಿನ ಸಭೆಗೆ ಗೈರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

Tags: MysoreSiddaramaiahಅಭಿವೃದ್ಧಿ ಕಾರ್ಯಕ್ರಮಕರ್ನಾಟಕಕೆಡಿಪಿಜಿಲ್ಲಾ ಪಂಚಾಯತ್ಮೈಸೂರುಸಿದ್ದರಾಮಯ್ಯ
Previous Post

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಆಮ್ ಆದ್ಮಿ ಶಾಸಕ ಆಸ್ಟ್ರೇಲಿಯಾಕ್ಕೆ ಪಲಾಯನ!

Next Post

ದೆಹಲಿ ಕಾರು ಸ್ಫೋಟ ಘಟನೆ: ಇದು ಭಯೋತ್ಪಾದಕ ದಾಳಿಯೇ? ಬಿಡುಗಡೆಯಾದ ರೋಮಾಂಚಕಾರಿ ಮಾಹಿತಿ!

Next Post

ದೆಹಲಿ ಕಾರು ಸ್ಫೋಟ ಘಟನೆ: ಇದು ಭಯೋತ್ಪಾದಕ ದಾಳಿಯೇ? ಬಿಡುಗಡೆಯಾದ ರೋಮಾಂಚಕಾರಿ ಮಾಹಿತಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS