• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಎಸ್‌ಐಆರ್ ವಿರುದ್ಧ ಫ್ರೀಡಂ ಪಾರ್ಕ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಬೃಹತ್ ಪ್ರತಿಭಟನಾ ರ‍್ಯಾಲಿ!

ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದ ಕಾಂಗ್ರೆಸ್.

by Dynamic Leader
05/11/2026
in ರಾಜಕೀಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ, ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗುರುವಾರ ಇಂಡಿಯಾ (INDIA) ಒಕ್ಕೂಟದ ವತಿಯಿಂದ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು.

ಈ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟದ ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಿ ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಖಂಡಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮೃತಪಟ್ಟವರನ್ನು ಹೊರತುಪಡಿಸಿ ಉಳಿದಂತೆ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾಗಿರುವ ಎಲ್ಲರಿಗೂ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಿದರು. ಹೆಸರು ಕಳೆದುಕೊಂಡ ಮತದಾರರಿಗೆ ನ್ಯಾಯ ಸಿಗುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು. ಎಸ್‌ಐಆರ್ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ವಿಚಾರದಲ್ಲಿ ಹಲವು ಗೊಂದಲಗಳು ಮತ್ತು ಅನುಮಾನಗಳು ಮೂಡಿದ್ದು, ಚುನಾವಣಾ ಆಯೋಗವು ಸಾರ್ವಜನಿಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ. ಆದ್ದರಿಂದ ಮುಖ್ಯ ಚುನಾವಣಾ ಆಯುಕ್ತರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಮಾತನಾಡಿ, ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಕರ್ನಾಟಕದಲ್ಲಿಯೂ ಹೋರಾಟ ಆರಂಭಿಸಲಾಗಿದೆ. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ ಹಾಗೂ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಹೇಳಿದರು.

ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜೊತೆಗೆ ಸಿಪಿಐ(ಎಂ), ಸಿಪಿಐ, ಸಿಪಿಐ(ಎಂಎಲ್) ಲಿಬರೇಶನ್, ಫಾರ್ವರ್ಡ್ ಬ್ಲಾಕ್, ಸಮಾಜವಾದಿ ಪಕ್ಷ ಸೇರಿದಂತೆ ವಿವಿಧ ಪ್ರಗತಿಪರ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಘಟನೆಗಳು, ದಲಿತ ಸಂಘಟನೆಗಳು ಹಾಗೂ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಗಣ್ಯರು ಹೋರಾಟಕ್ಕೆ ಕೈಜೋಡಿಸಿದರು.

ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಮೋಹನ್ ಬಾಬು ಅವರ ನೇತೃತ್ವದಲ್ಲಿ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಿ ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ಕ್ಷೇತ್ರದ ಕಾಂಗ್ರೆಸ್ ಸಂಘಟನೆಯ ಒಗ್ಗಟ್ಟು ಮತ್ತು ಸಕ್ರಿಯತೆಯನ್ನು ಪ್ರದರ್ಶಿಸಿತು.

Tags: dynamicleaderFreedom ParkINDIA AllianceProtestSIRಇಂಡಿಯಾ ಮೈತ್ರಿಕೂಟಎಸ್‌ಐಆರ್ಜ್ಞಾನೇಶ್ ಕುಮಾರ್ಡಿ.ಕೆ.ಮೋಹನ್ ಬಾಬುಡೈನಾಮಿಕ್ ಲೀಡರ್ಪ್ರಕಾಶ್‌ ರಾಜ್ಪ್ರತಿಭಟನಾ ರ‍್ಯಾಲಿ!ಫ್ರೀಡಂ ಪಾರ್ಕ್ರಾಜೀನಾಮೆ
Previous Post

ಅಮೆರಿಕ ಮಧ್ಯಂತರ ಚುನಾವಣೆಯಲ್ಲಿ ಟ್ರಂಪ್‌ಗೆ ಐತಿಹಾಸಿಕ ಹಿನ್ನಡೆ; MAGA ರಾಜಕೀಯಕ್ಕೆ ಮತದಾರರ ತಿರುಗೇಟು!

Next Post

ಇಸ್ರೇಲ್‌ನಲ್ಲಿ ಅತಂತ್ರ ವಿಧಾನಸಭೆ: ನೆತನ್ಯಾಹುಗೆ ಅಧಿಕಾರದ ಸಂಕಷ್ಟ; ಪ್ರತಿಪಕ್ಷಕ್ಕೆ 67 ಸಂಸದರ ಬೆಂಬಲ?

Next Post

ಇಸ್ರೇಲ್‌ನಲ್ಲಿ ಅತಂತ್ರ ವಿಧಾನಸಭೆ: ನೆತನ್ಯಾಹುಗೆ ಅಧಿಕಾರದ ಸಂಕಷ್ಟ; ಪ್ರತಿಪಕ್ಷಕ್ಕೆ 67 ಸಂಸದರ ಬೆಂಬಲ?

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಅಧ್ಯಾಯ 5: ಸಂಪತ್ತಿನಾಚೆಗೂ ಜೀವಂತವಾಗಿರುವ ಸಾಮಾಜಿಕ ಬದ್ಧತೆ; ಬೊಮ್ಮನಹಳ್ಳಿ ಬಾಬು ಅವರ ಮಾನವೀಯ ಮುಖ!

18/11/2026

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಕಸ ಆಯುವ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

18/11/2026

ಬೆಂಗಳೂರಿನ ಪ್ರವಾಹ ಸಮಸ್ಯೆಗೆ ರೂ.2,000 ಕೋಟಿ ವೆಚ್ಚದ ಬೃಹತ್ ಯೋಜನೆಗೆ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ: ಯೋಜನೆಯ ಫುಲ್ ಡಿಟೇಲ್ಸ್ ಇಲ್ಲಿದೆ.

17/11/2026

ಅಧ್ಯಾಯ 4: ಬಡತನದ ನೆಲೆಯಿಂದ ಉದ್ಯಮ ಸಾಮ್ರಾಜ್ಯದ ಉತ್ತುಂಗದವರೆಗೆ, ಬೊಮ್ಮನಹಳ್ಳಿ ಬಾಬು ಅವರ ಯಶಸ್ಸಿನ ಪಯಣ!

17/11/2026

Recent News

ಅಧ್ಯಾಯ 5: ಸಂಪತ್ತಿನಾಚೆಗೂ ಜೀವಂತವಾಗಿರುವ ಸಾಮಾಜಿಕ ಬದ್ಧತೆ; ಬೊಮ್ಮನಹಳ್ಳಿ ಬಾಬು ಅವರ ಮಾನವೀಯ ಮುಖ!

18/11/2026

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಕಸ ಆಯುವ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

18/11/2026

ಬೆಂಗಳೂರಿನ ಪ್ರವಾಹ ಸಮಸ್ಯೆಗೆ ರೂ.2,000 ಕೋಟಿ ವೆಚ್ಚದ ಬೃಹತ್ ಯೋಜನೆಗೆ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ: ಯೋಜನೆಯ ಫುಲ್ ಡಿಟೇಲ್ಸ್ ಇಲ್ಲಿದೆ.

17/11/2026

ಅಧ್ಯಾಯ 4: ಬಡತನದ ನೆಲೆಯಿಂದ ಉದ್ಯಮ ಸಾಮ್ರಾಜ್ಯದ ಉತ್ತುಂಗದವರೆಗೆ, ಬೊಮ್ಮನಹಳ್ಳಿ ಬಾಬು ಅವರ ಯಶಸ್ಸಿನ ಪಯಣ!

17/11/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಅಧ್ಯಾಯ 5: ಸಂಪತ್ತಿನಾಚೆಗೂ ಜೀವಂತವಾಗಿರುವ ಸಾಮಾಜಿಕ ಬದ್ಧತೆ; ಬೊಮ್ಮನಹಳ್ಳಿ ಬಾಬು ಅವರ ಮಾನವೀಯ ಮುಖ!

18/11/2026

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಕಸ ಆಯುವ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

18/11/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS