• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

ಬೈರತಿ ಬಸವರಾಜ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ: ಪೊಲೀಸ್ ಠಾಣೆ ಎದುರು ಪ್ರತಿಭಟನೆ, ಭಾವಚಿತ್ರ ದಹಿಸಿ ಧಿಕ್ಕಾರ!

ಪ್ರತಿಭಟನಾಕಾರರು ಶಾಸಕ ಬೈರತಿ ಬಸವರಾಜ್ ಅವರ ಭಾವಚಿತ್ರಗಳನ್ನು ದಹಿಸಿ, ಅವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

by Dynamic Leader
08/11/2026
in ಬೆಂಗಳೂರು
0
0
SHARES
0
VIEWS
Share on FacebookShare on Twitter

ಬೆಂಗಳೂರು: ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವಿಚಾರವಾಗಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಮತ್ತು ಕಾಂಗ್ರೆಸ್‌ನ ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ನಡುವೆ ನಡೆದಿದ್ದ ಬಹಿರಂಗ ವಾಗ್ವಾದ ಇದೀಗ ರಾಜಕೀಯ ಸಂಘರ್ಷಕ್ಕೆ ತಿರುಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ರಾಮಮೂರ್ತಿನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ಟಿನ್ ಫ್ಯಾಕ್ಟರಿ ಬಳಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ‘ವಾರ್ಡ್ ಒನ್ ಅಭಿಯಾನ’ದ ಎರಡನೇ ಹಂತಕ್ಕೆ ಚಾಲನೆ ನೀಡುವ ಸಂದರ್ಭದಲ್ಲಿ ಈ ಘಟನೆ ನಡೆದಿತ್ತು. ಸಚಿವರನ್ನು ಸ್ವಾಗತಿಸಲು ಆಗಮಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು, ಕ್ಷೇತ್ರದಲ್ಲಿ ಹದಗೆಟ್ಟಿರುವ ರಸ್ತೆಗಳು, ಅಭಿವೃದ್ಧಿ ಕಾಮಗಾರಿಗಳ ವಿಳಂಬ ಸೇರಿದಂತೆ ಹಲವು ನಾಗರಿಕ ಸಮಸ್ಯೆಗಳಿಗೆ ಶಾಸಕ ಬೈರತಿ ಬಸವರಾಜ್ ಅವರೇ ಹೊಣೆ ಎಂದು ಆರೋಪಿಸಿದ್ದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸ್ವಾಮಿ ಅವರು ಶಾಸಕರನ್ನು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದ ಆಕ್ರೋಶಗೊಂಡ ಬೈರತಿ ಬಸವರಾಜ್ ತಿರುಗೇಟು ನೀಡಿದ ಪರಿಣಾಮ ಇಬ್ಬರ ನಡುವೆ ಸಾರ್ವಜನಿಕರ ಎದುರೇ ಮಾತಿನ ಚಕಮಕಿ ನಡೆದಿತ್ತು. ಪರಿಸ್ಥಿತಿ ಕೈಮೀರುವ ಸಾಧ್ಯತೆಯನ್ನು ಅರಿತ ಸಚಿವ ಕೃಷ್ಣ ಬೈರೇಗೌಡ ಹಾಗೂ ಪೊಲೀಸರು ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ದೂರು ಸಲ್ಲಿಸಿ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಇಂದು ನೂರಾರು ಕಾಂಗ್ರೆಸ್ ಕಾರ್ಯಕರ್ತರು ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಅಲ್ಲಿಂದ ರಾಮಮೂರ್ತಿನಗರ ಪೊಲೀಸ್ ಠಾಣೆಯವರೆಗೆ ಮೆರವಣಿಗೆ ನಡೆಸಿದರು.

ಠಾಣೆಯ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಶಾಸಕ ಬೈರತಿ ಬಸವರಾಜ್ ಅವರ ಭಾವಚಿತ್ರಗಳನ್ನು ದಹಿಸಿ, ಅವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಬಳಿಕ ಶಾಸಕರ ವಿರುದ್ಧ ಪ್ರತಿ ದೂರು ದಾಖಲಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕಾಂಗ್ರೆಸ್ ನಾಯಕರ ಉಪಸ್ಥಿತಿ
ಕೆ.ಆರ್.ಪುರಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್. ಕೋದಂಡರಾಮ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೊರಮಾವು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ವೆಂಕಟೇಶ್, ಉದಯನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರುಳಪ್ಪ, ಮಾಜಿ ಕಾರ್ಪೊರೇಟರ್ ಅಮಾನುಲ್ಲಾ, ಹಿರಿಯ ಕಾಂಗ್ರೆಸ್ ಮುಖಂಡ ಅಗರ ಪ್ರಕಾಶ್, ಕೆ.ಆರ್.ಪುರಂ ನಗರಸಭೆಯ ಮಾಜಿ ಅಧ್ಯಕ್ಷೆ ಸಾಕಮ್ಮ ರಾಮಯ್ಯ, ಕ್ಷೇತ್ರದ ಗ್ಯಾರಂಟಿ ಸಮಿತಿ ಅಧ್ಯಕ್ಷ ಜಯರಾಂ, ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಬಶೀರ್ ಜಾಮಾದಾರ್, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಆರ್. ಪುರುಷೋತ್ತಮ್ ಬಾಬು ಸೇರಿದಂತೆ ಬ್ಲಾಕ್ ಹಾಗೂ ವಾರ್ಡ್ ಮಟ್ಟದ ಕಾಂಗ್ರೆಸ್ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಆರಂಭವಾದ ವಾಗ್ವಾದ ಇದೀಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದ್ದು, ಮುಂದಿನ ದಿನಗಳಲ್ಲಿ ಈ ಬೆಳವಣಿಗೆ ಯಾವ ತಿರುವು ಪಡೆದುಕೊಳ್ಳಲಿದೆ ಎಂಬ ಕುತೂಹಲ ಮೂಡಿಸಿದೆ.

Tags: Dynamic Leaderಕಾಂಗ್ರೆಸ್ ಪ್ರತಿಭಟನೆಕೃಷ್ಣ ಬೈರೇಗೌಡಕೆ.ಆರ್.ಪುರಂಗೂಂಡಾಗಿರಿ ವರ್ತನೆಬೈರತಿ ಬಸವರಾಜಭ್ರಷ್ಟಾಚಾರ ಆರೋಪರಾಮಮೂರ್ತಿ ನಗರ ಪೊಲೀಸ್ ಠಾಣೆವಾರ್ಡ್ ಒನ್ ಅಭಿಯಾನ
Previous Post

ಬೆಂಗಳೂರಿನ ಟ್ರಾಫಿಕ್ ಜಾಮ್‌ಗೆ ಹೊಸ ಪರಿಹಾರ: ವಾಹನಗಳಿಗೂ ವಾರದ ರಜೆ ನೀಡುವ ಆಲೋಚನೆ?

Next Post

ಪಾಕಿಸ್ತಾನದ ಸಾಮಾಜಿಕ, ಸಾಂಸ್ಕೃತಿಕ ರಚನೆಯ ಅವಿಭಾಜ್ಯ ಅಂಗ ಹಿಂದೂ ಸಮುದಾಯ: ಪ್ರಧಾನಿ ಶೆಹಬಾಜ್ ಷರೀಫ್

Next Post

ಪಾಕಿಸ್ತಾನದ ಸಾಮಾಜಿಕ, ಸಾಂಸ್ಕೃತಿಕ ರಚನೆಯ ಅವಿಭಾಜ್ಯ ಅಂಗ ಹಿಂದೂ ಸಮುದಾಯ: ಪ್ರಧಾನಿ ಶೆಹಬಾಜ್ ಷರೀಫ್

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಅಧ್ಯಾಯ 5: ಸಂಪತ್ತಿನಾಚೆಗೂ ಜೀವಂತವಾಗಿರುವ ಸಾಮಾಜಿಕ ಬದ್ಧತೆ; ಬೊಮ್ಮನಹಳ್ಳಿ ಬಾಬು ಅವರ ಮಾನವೀಯ ಮುಖ!

18/11/2026

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಕಸ ಆಯುವ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

18/11/2026

ಬೆಂಗಳೂರಿನ ಪ್ರವಾಹ ಸಮಸ್ಯೆಗೆ ರೂ.2,000 ಕೋಟಿ ವೆಚ್ಚದ ಬೃಹತ್ ಯೋಜನೆಗೆ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ: ಯೋಜನೆಯ ಫುಲ್ ಡಿಟೇಲ್ಸ್ ಇಲ್ಲಿದೆ.

17/11/2026

ಅಧ್ಯಾಯ 4: ಬಡತನದ ನೆಲೆಯಿಂದ ಉದ್ಯಮ ಸಾಮ್ರಾಜ್ಯದ ಉತ್ತುಂಗದವರೆಗೆ, ಬೊಮ್ಮನಹಳ್ಳಿ ಬಾಬು ಅವರ ಯಶಸ್ಸಿನ ಪಯಣ!

17/11/2026

Recent News

ಅಧ್ಯಾಯ 5: ಸಂಪತ್ತಿನಾಚೆಗೂ ಜೀವಂತವಾಗಿರುವ ಸಾಮಾಜಿಕ ಬದ್ಧತೆ; ಬೊಮ್ಮನಹಳ್ಳಿ ಬಾಬು ಅವರ ಮಾನವೀಯ ಮುಖ!

18/11/2026

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಕಸ ಆಯುವ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

18/11/2026

ಬೆಂಗಳೂರಿನ ಪ್ರವಾಹ ಸಮಸ್ಯೆಗೆ ರೂ.2,000 ಕೋಟಿ ವೆಚ್ಚದ ಬೃಹತ್ ಯೋಜನೆಗೆ ಡಿ.ಕೆ.ಶಿವಕುಮಾರ್ ಶಂಕುಸ್ಥಾಪನೆ: ಯೋಜನೆಯ ಫುಲ್ ಡಿಟೇಲ್ಸ್ ಇಲ್ಲಿದೆ.

17/11/2026

ಅಧ್ಯಾಯ 4: ಬಡತನದ ನೆಲೆಯಿಂದ ಉದ್ಯಮ ಸಾಮ್ರಾಜ್ಯದ ಉತ್ತುಂಗದವರೆಗೆ, ಬೊಮ್ಮನಹಳ್ಳಿ ಬಾಬು ಅವರ ಯಶಸ್ಸಿನ ಪಯಣ!

17/11/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಅಧ್ಯಾಯ 5: ಸಂಪತ್ತಿನಾಚೆಗೂ ಜೀವಂತವಾಗಿರುವ ಸಾಮಾಜಿಕ ಬದ್ಧತೆ; ಬೊಮ್ಮನಹಳ್ಳಿ ಬಾಬು ಅವರ ಮಾನವೀಯ ಮುಖ!

18/11/2026

ಬೆಂಗಳೂರಿನಲ್ಲಿ ಅಮಾನವೀಯ ಕೃತ್ಯ: ಕಸ ಆಯುವ ವ್ಯಕ್ತಿಯ ಕೈಕಾಲು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!

18/11/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS