• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ದೇಶ

10 ಮಸೂದೆಗಳ ಅನುಮೋದನೆ: ತಮಿಳುನಾಡು ರಾಜ್ಯಪಾಲರ ನಿರ್ಧಾರವನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!

ಪರ್ಯಾಯ ರಾಜಕೀಯ ನಡೆಸಲು ರಾಜಭವನವನ್ನು ಬಿಜೆಪಿಯ ಕಛೇರಿಗಳಂತೆ ಮಾರ್ಪಡಿಸಿದ್ದ ಬಿಜೆಪಿಗೆ ಇದು ಮುಖಭಂಗ

by Dynamic Leader
08/04/2025
in ದೇಶ
0
0
SHARES
68
VIEWS
Share on FacebookShare on Twitter

ನವದೆಹಲಿ: ರಾಜ್ಯಪಾಲರು ಒಂದು ತಿಂಗಳೊಳಗೆ ಮಸೂದೆಗಳ ಅನುಮೋದನೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಮಿಳುನಾಡು ಸರ್ಕಾರ ಹೂಡಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ತಮಿಳುನಾಡು ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದ 10 ಮಸೂದೆಗಳನ್ನು ಸುಪ್ರೀಂ ಕೋರ್ಟ್ ಅನುಮೋದಿಸಿದೆ.

ತಮಿಳುನಾಡು ವಿಧಾನಸಭೆ ಅಂಗೀಕರಿಸಿದ ಮಸೂದೆಗಳ ಅನುಮೋದನೆಯನ್ನು ರಾಜ್ಯಪಾಲರು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಪರ್ದಿವಾಲಾ ಮತ್ತು ಮಹಾದೇವನ್ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಿತ್ತು.

ಈ ಪ್ರಕರಣದಲ್ಲಿ, ಇಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಪರ್ದಿವಾಲಾ ಮತ್ತು ಮಹಾದೇವನ್ ಅವರ ಪೀಠವು ಮಹತ್ವದ ತೀರ್ಪು ನೀಡಿದೆ.

ತೀರ್ಪಿನ ಮುಖ್ಯಾಂಶಗಳು:

• ಸಂವಿಧಾನದ 200ನೇ ವಿಧಿಯ ಪ್ರಕಾರ ರಾಜ್ಯಪಾಲರು ನಿರ್ಧಾರ ತೆಗೆದುಕೊಳ್ಳಬೇಕು.

• ತಮಿಳುನಾಡು ಸರ್ಕಾರದ 10 ಮಸೂದೆಗಳನ್ನು ರಾಜ್ಯಪಾಲರು ಒಪ್ಪಿಗೆ ನೀಡದೆ ತಡೆಹಿಡಿದಿರುವುದು ಕಾನೂನು ಬಾಹಿರ.

• ವಿಧಾನಸಭೆಯಲ್ಲಿ ಮತ್ತೆ ಅಂಗೀಕಾರವಾದ ಮಸೂದೆಗಳ ಕುರಿತು ರಾಜ್ಯಪಾಲರ ಕ್ರಮ ಸೂಕ್ತವಲ್ಲ.

• ರಾಜ್ಯಪಾಲರು ಮಸೂದೆಯನ್ನು ರಾಷ್ಟ್ರಪತಿಗೆ ಕಳುಹಿಸಿದ್ದು ತಪ್ಪು.

• ಪಂಜಾಬ್ ರಾಜ್ಯಪಾಲರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಈಗಾಗಲೇ ಸ್ಪಷ್ಟ ತೀರ್ಪು ನೀಡಿದೆ.

• ಮಸೂದೆಗೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ 3 ಆಯ್ಕೆಗಳಿವೆ. ಮಸೂದೆಗಳನ್ನು ಅನುಮೋದಿಸಬೇಕು ಅಥವಾ ಅದನ್ನು ಅಮಾನತುಗೊಳಿಸಬೇಕು ಅಥವಾ ರಾಷ್ಟ್ರಪತಿಗೆ ಕಳುಹಿಸಬೇಕು.

• ರಾಜ್ಯಪಾಲರಿಗೆ ವೀಟೋ ಅಧಿಕಾರವಿಲ್ಲ.

• ರಾಜ್ಯಪಾಲರು ತಾವು ಅಮಾನತುಗೊಳಿಸಿದ ಮಸೂದೆಯನ್ನು ಅಮಾನ್ಯವೆಂದು ಘೋಷಿಸುವ ಯಾವುದೇ ಹಕ್ಕನ್ನು ಹೊಂದಿಲ್ಲ.

• ಮಸೂದೆಯನ್ನು ಅನುಮೋದಿಸದೇ ವಿಳಂಬ ಮಾಡಲು ಸಾಧ್ಯವಿಲ್ಲ.

• ರಾಜ್ಯಪಾಲರು ಸಚಿವ ಸಂಪುಟದ ಸಲಹೆಯ ಮೇರೆಗೆ ಕಾರ್ಯನಿರ್ವಹಿಸಬೇಕು. ರಾಜ್ಯಪಾಲರು ಒಂದು ತಿಂಗಳೊಳಗೆ ಮಸೂದೆಗಳನ್ನು ಅನುಮೋದಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು.

• ಅನುಮೋದನೆ ನೀಡದ ಮಾಸೂದೆಗಳನ್ನು 3 ತಿಂಗಳೊಳಗೆ ಹಿಂತಿರುಗಿಸಬೇಕು.

• ವಿಧಾನಸಭೆಯಲ್ಲಿ ಪುನಃ ಅಂಗೀಕಾರವಾದ ಮಸೂದೆಗಳನ್ನು ರಾಜ್ಯಪಾಲರು ಅನುಮೋದಿಸಿರಬೇಕು.

• ರಾಜ್ಯಪಾಲರು ನಿರಂಕುಶವಾಗಿ ವರ್ತಿಸಲು ಸಾಧ್ಯವಿಲ್ಲ.

• ಮಸೂದೆಗಳನ್ನು ಅನುಮೋದಿಸುವ ಬಗ್ಗೆ ರಾಜ್ಯಪಾಲರು ಸಕಾಲಿಕ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.

ಅಂಬೇಡ್ಕರ್ ಅವರನ್ನು ಉಲ್ಲೇಖಿಸಿ ಮಾತನಾಡಿರುವ ನ್ಯಾಯಮೂರ್ತಿ ಪರ್ದಿವಾಲಾ ಅವರು “ಸಂವಿಧಾನ ಎಷ್ಟೇ ಉತ್ತಮವಾಗಿದ್ದರೂ, ಅದನ್ನು ಜಾರಿಗೆ ತರುವವರು ಒಳ್ಳೆಯವರಲ್ಲದಿದ್ದರೆ, ಅದು ಕೆಟ್ಟ ಪರಿಸ್ಥಿತಿಗೆ ಕಾರಣವಾಗುತ್ತದೆ.” ಎಂದು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯಪಾಲರ ಮುಖಾಂತರ ವಿರೋಧ ಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ಪರ್ಯಾಯ ರಾಜಕೀಯ ನಡೆಸಲು ರಾಜಭವನವನ್ನು ಬಿಜೆಪಿಯ ಕಛೇರಿಗಳಂತೆ ಮಾರ್ಪಡಿಸಿದ್ದ ಬಿಜೆಪಿಗೆ ಮತ್ತು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿಗೆ ಇದು ಅರಗಿಸಿಕೊಳ್ಳಲಾಗದ ಅಪಮಾನ ಎಂಬುದರಲ್ಲಿ ಎರಡು ಮಾತಿಲ್ಲ.

Tags: M.K.StalinR.N.RaviSupreme CourtTamilnadu Governorಆರ್.ಎನ್.ರವಿಎಂ.ಕೆ.ಸ್ಟಾಲಿನ್ಡಿಎಂಕೆತಮಿಳುನಾಡು ರಾಜ್ಯಪಾಲರುಸುಪ್ರೀಂ ಕೋರ್ಟ್
Previous Post

ಕುತ್ತಿಗೆಯ ಮೇಲೆ ರೂ.6 ಕೋಟಿ ಮೌಲ್ಯದ ಆಭರಣ: ಮಹಾ ಕುಂಭಮೇಳದಲ್ಲಿ ಗಮನ ಸೆಳೆದ ಗೋಲ್ಡನ್ ಬಾಬಾ!

Next Post

ಪ್ರಾಚೀನತೆಯನ್ನು ಆಧುನಿಕತೆಯೊಂದಿಗೆ ಸಂಯೋಜಿಸೋಣ: ಪ್ರಧಾನಿ ಮೋದಿ

Next Post

ಪ್ರಾಚೀನತೆಯನ್ನು ಆಧುನಿಕತೆಯೊಂದಿಗೆ ಸಂಯೋಜಿಸೋಣ: ಪ್ರಧಾನಿ ಮೋದಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS