• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಸಂಪಾದಕೀಯ

ಪಹಲ್ಗಾಮ್ ದಾಳಿ: ಕರುಣೆಯಿಲ್ಲದೆ ಕೊಲ್ಲುವುದು ನಿರ್ದಯ ಕೃತ್ಯ; ಇದಕ್ಕೆ ಕ್ಷಮೆಯೇ ಇಲ್ಲ! – ಸಂಪಾದಕೀಯ

'ಹಿಂದೂಗಳ ಮೇಲೆ ಉಗ್ರರ ದಾಳಿ' ಎಂದು ಹೇಳಿಕೊಂಡು, ಕೂಗಾಡುತ್ತಿರುವ ಕೋಮುವಾದಿ ನಾಯಕರುಗಳಿಗೆ ಮತ್ತು ಅದರ ತತ್ವ-ಸಿದ್ಧಾಂತಗಳನ್ನು ಪ್ರಚಾರ ಮಾಡುತ್ತಿರುವ ಕೆಲವೊಂದು ಮಾಧ್ಯಮಗಳಿಗೆ ನಾಚಿಕೆಯಾಗಬೇಕು.

by Dynamic Leader
23/04/2025
in ಸಂಪಾದಕೀಯ
0
0
SHARES
64
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಮಂಗಳವಾರ (ಏಪ್ರಿಲ್ 22) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 28 ಜನರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸಾವನ್ನಪ್ಪಿರುವುದು ಆಘಾತವನ್ನು ಉಂಟು ಮಾಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಈಗ ಬೇಸಿಗೆ ಪ್ರವಾಸೋದ್ಯಮ ಆರಂಭವಾಗಿರುವುದರಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ.  ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಬೆಟ್ಟದಲ್ಲಿ ದಟ್ಟವಾದ ಕಾಡುಗಳು, ಸ್ಪಷ್ಟವಾದ ತೊರೆಗಳು ಮತ್ತು ವಿಶಾಲವಾದ ಹುಲ್ಲುಗಾವಲುಗಳು ಇರುವುದರಿಂದ ಈ ಪ್ರದೇಶವನ್ನು ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲಾಗುತ್ತದೆ. ಇದರಿಂದ ಪಹಲ್ಗಾಮ್ ಒಂದು ಜನಪ್ರಿಯ ಪ್ರವಾಸಿ ತಾಣವಾಗಿದೆ. ಇಲ್ಲಿನ ಬೈಸರನ್ ಕಣಿವೆ ಪ್ರದೇಶಕ್ಕೆ ವಾಹನಗಳಿಂದ ಹೋಗಲು ಸಾದ್ಯವಿಲ್ಲ. ಕಾಲ್ನಡಿಗೆಯಲ್ಲಿ ಅಥವಾ ಕುದುರೆಯ ಮೂಲಕ ಮಾತ್ರ ತಲುಪಬಹುದು.

ಇಲ್ಲಿಗೆ ಭೇಟಿ ನೀಡಿದ್ದ ಕೆಲ ಪ್ರವಾಸಿಗರನ್ನು ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸೇನಾ ಸಮವಸ್ತ್ರದಲ್ಲಿದ್ದ ಭಯೋತ್ಪಾದಕರು ಸುತ್ತುವರಿದು ಗುಂಡಿನ ದಾಳಿ ನಡೆಸಿದ್ದಾರೆ. ಬಯಲು ಪ್ರದೇಶವಾದ್ದರಿಂದ ಪ್ರವಾಸಿಗರು ಗುಂಡಿನ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಈ ದಾಳಿಯಲ್ಲಿ ವಿದೇಶಿ ಪ್ರವಾಸಿಗರು ಸೇರಿದಂತೆ 28 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಇದು ಉಗ್ರರ ಯೋಜಿತ ದಾಳಿಯಂತೆ ಕಾಣುತ್ತಿದೆ. ಉಗ್ರರ ದಾಳಿ ನಡೆದ ಸ್ಥಳಕ್ಕೆ ಭದ್ರತಾ ಪಡೆಗಳು ದೌಡಾಯಿಸಿದ್ದು, ಶೋಧ ಕಾರ್ಯ ಆರಂಭಿಸಿವೆ. ಸ್ಥಳೀಯರು ಕುದುರೆಗಳ ಸಹಾಯದಿಂದ ಗಾಯಾಳುಗಳನ್ನು ರಕ್ಷಿಸಿದ್ದಾರೆ. ನಂತರ ಸೇನಾ ಹೆಲಿಕಾಪ್ಟರ್‌ಗಳನ್ನು ರವಾನಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

2019ರಲ್ಲಿ ಕಾಶ್ಮೀರದ ಪುಲ್ವಾಮಾ ಪ್ರದೇಶದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ 47 ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ಆ ಬಳಿಕ ಉಗ್ರರು ನಡೆಸಿದ ಅತಿ ದೊಡ್ಡ ದಾಳಿ ಇದಾಗಿದೆ. ಅಮೆರಿಕಾದ ಉಪಾಧ್ಯಕ್ಷ ಜೆ.ಡಿ.ವಾನ್ಸ್ ಭಾರತ ಪ್ರವಾಸದಲ್ಲಿರುವಾಗ ನಡೆದಿರುವ ದಾಳಿ ಆಘಾತಕ್ಕೆ ಕಾರಣವಾಗಿದೆ.

ಕಾಶ್ಮೀರದಲ್ಲಿ ಈ ವರ್ಷದ ಅಮರನಾಥ ಯಾತ್ರೆ ಜುಲೈ 3 ರಂದು ಆರಂಭವಾಗಲಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಮತ್ತು ಗಂದರ್ಬಾಲ್ ಜಿಲ್ಲೆಯ ಬಲ್ಟಾಲ್ ಮೂಲಕ ಯಾತ್ರೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಈ ದಾಳಿಯು ಅಮರನಾಥ ಯಾತ್ರೆಯ ಭದ್ರತೆಯನ್ನು ಪ್ರಶ್ನಿಸುವಂತೆ ಮಾಡಿದೆ.

ಸೇನಾ ಸಮವಸ್ತ್ರದಲ್ಲಿ ಬಂದ ಉಗ್ರರು, ಪ್ರವಾಸಿಗರನ್ನು ಯಾವುದೇ ದಯೆಯಿಲ್ಲದೆ ಅತ್ಯಂತ ಕ್ರೂರವಾಗಿ ಗುಂಡಿಕ್ಕಿ ಕೊಲ್ಲುವುದೆಲ್ಲವೂ ಭಯೋತ್ಪಾದನೆಯ ಪರಮಾವಧಿ. ಭಾರತೀಯ ನಾಗರಿಕರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ಭದ್ರತಾ ನೀತಿಯನ್ನು ಕೂಡ ಈ ಸಂದರ್ಭದಲ್ಲಿ ಖಂಡಿಸಬೇಕಾಗಿದೆ.

ಇಂತಹ ದುರಂತ ಪರಿಸ್ಥಿತಿಯಲ್ಲೂ ‘ಹಿಂದೂಗಳ ಮೇಲೆ ಉಗ್ರರ ದಾಳಿ’ ಎಂದು ಹೇಳಿಕೊಂಡು, ಕೂಗಾಡುತ್ತಿರುವ ಕೋಮುವಾದಿ ಪಕ್ಷಗಳ ಮುಖಂಡರುಗಳಿಗೆ ಮತ್ತು ಅದರ ತತ್ವ-ಸಿದ್ಧಾಂತಗಳನ್ನು ಪ್ರಚಾರ ಮಾಡುತ್ತಿರುವ ಕೆಲವೊಂದು ಮಾಧ್ಯಮಗಳಿಗೆ ನಾಚಿಕೆಯಾಗಬೇಕು.

Tags: 28 Killed28 ಮಂದಿ ಸಾವುIndian TouristsPahalgam Terror Attackಉಗ್ರರ ದಾಳಿಪಹಲ್ಗಾಮ್ ದಾಳಿಪ್ರವಾಸಿಗರುಭಯೋತ್ಪಾದಕರು
Previous Post

ಅಣ್ಣಾಮಲೈ ಆಂಧ್ರಪ್ರದೇಶದಿಂದ ರಾಜ್ಯಸಭೆಗೆ.. ಶೀಘ್ರದಲ್ಲೇ ಅಧಿಕೃತ ಘೋಷಣೆ!

Next Post

ಪಹಲ್ಗಾಮ್ ದಾಳಿಯಲ್ಲಿ TRF… ಯಾರು ಇವರು? ಸಂಪೂರ್ಣ ಮಾಹಿತಿ ಇಲ್ಲಿದೆ!

Next Post

ಪಹಲ್ಗಾಮ್ ದಾಳಿಯಲ್ಲಿ TRF... ಯಾರು ಇವರು? ಸಂಪೂರ್ಣ ಮಾಹಿತಿ ಇಲ್ಲಿದೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS