• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ: ಸಿದ್ದರಾಮಯ್ಯ

ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ-ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ.

by Dynamic Leader
27/04/2025
in ರಾಜ್ಯ
0
0
SHARES
29
VIEWS
Share on FacebookShare on Twitter

ಬೆಂಗಳೂರು: “ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ. ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಪಹಲ್ಗಾಮ್‌ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ” ಎಂದು ಹೇಳಿದ್ದಾರೆ.

“ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗ ಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ” ಎಂದು ಸಿದ್ದರಾಮಯ್ಯ ಪುನರುಚ್ಚಿಸಿದ್ದಾರೆ.

“ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ” ಎಂದಿದ್ದಾರೆ.

“ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ. ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ” ಎಂದು ಹೇಳಿದ್ದಾರೆ.

“ಈ ಸಂದರ್ಭದಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ”  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Tags: Pahalgam AttackPakistanಉಗ್ರರ ದಾಳಿಗೂಢಚರ್ಯೆ ವೈಫಲ್ಯಪಹಲ್ಗಾಮ್ಪಾಕಿಸ್ತಾನ್ ಪ್ರೇರಿತಭದ್ರತಾ ವೈಫಲ್ಯಯುದ್ಧರಾಜತಾಂತ್ರಿಕ ಕ್ರಮಸಿಂಧೂ ನದಿ
Previous Post

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸುದ್ದಿಗಳನ್ನು ಪ್ರಕಟಿಸುವಲ್ಲಿ ಮಾಧ್ಯಮಗಳಿಗೆ ಜವಾಬ್ದಾರಿಯ ಅಗತ್ಯವಿದೆ: ಕೇಂದ್ರ ಸರ್ಕಾರ

Next Post

“ಡಾಗ್ ಮಾಫಿಯಾ” ಎಂದು ನ್ಯಾಯಾಲಯವನ್ನು ಅವಮಾನಿಸಿದ ಮಹಿಳೆಗೆ ಒಂದು ವಾರದ ಸಾದಾ ಜೈಲು 20 ಸಾವಿರ ದಂಡ!

Next Post

"ಡಾಗ್ ಮಾಫಿಯಾ" ಎಂದು ನ್ಯಾಯಾಲಯವನ್ನು ಅವಮಾನಿಸಿದ ಮಹಿಳೆಗೆ ಒಂದು ವಾರದ ಸಾದಾ ಜೈಲು 20 ಸಾವಿರ ದಂಡ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS