• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಕ್ರೀಡೆ

ಅಭಿಮಾನಿಗಳು ಆಟವನ್ನು ಆಟದಂತೆ ನೋಡಬೇಕು; ಹುಚ್ಚರಂತೆ ಕುಣಿದಾಡಿದರೆ ಇಂತಹ ಸಂಭವ ಖಚಿತ! – ಡಿ.ಸಿ.ಪ್ರಕಾಶ್

ವಿರೋಧಪಕ್ಷವಾದ ಬಿಜೆಪಿ ಈ ದುರಂತ ಘಟನೆಯನ್ನು ರಾಜಕೀಯಕ್ಕೆ ಬಳಸಿಕೊಂಡು ಸರ್ಕಾರವನ್ನು ನಿಂದಿಸುತ್ತಿರುವುದು ನಾಚಿಕೆಗೇಡು.

by Dynamic Leader
04/06/2025
in ಕ್ರೀಡೆ
0
ಐಪಿಎಲ್ 2025ರ ಟೂರ್ನಿಯಲ್ಲಿ ಚಾಂಪಿಯನ್ ಆದ ಬಳಿಕ ಇಂದು ಬೆಂಗಳೂರಿನಲ್ಲಿ ನಡೆದ RCB ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 33 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ

0
SHARES
64
VIEWS
Share on FacebookShare on Twitter

ಡಿ.ಸಿ.ಪ್ರಕಾಶ್

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಬರೋಬ್ಬರಿ 18 ವರ್ಷಗಳ ಬಳಿಕ ಐಪಿಎಲ್ (IPL) ಟ್ರೋಫಿ ಗೆದ್ದಿದ್ದು, ಆ ಮೂಲಕ ಕೋಟ್ಯಾಂತರ ಆರ್‌ಸಿಬಿ (RCB) ಅಭಿಮಾನಿಗಳ ಕನಸನ್ನು ನನಸು ಮಾಡಿದೆ.

ಐಪಿಎಲ್ 2025ರ ಟೂರ್ನಿಯಲ್ಲಿ ಚಾಂಪಿಯನ್ ಆದ ಬಳಿಕ ಇಂದು ಬೆಂಗಳೂರಿನಲ್ಲಿ ನಡೆದ RCB ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 33 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಲ್ತುಳಿತ ದುರಂತದ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ವಿಧಾನಸೌಧದ ಬಳಿ ಯಾವುದೇ ದುರಂತ ಸಂಭವಿಸಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ದುರಂತ ಸಂಭವಿಸಿದೆ. ಇಂತಹ ದೊಡ್ಡ ದುರಂತ ಸಂಭವಿಸಬಾರದಿತ್ತು. ಇದರಿಂದ ತುಂಬ ದುಃಖವಾಗುತ್ತಿದೆ” ಎಂದು ಹೇಳಿದರು.

“35 ಸಾವಿರ ಜನ ಕುಳಿತುಕೊಳ್ಳುವ ಸಾಮರ್ಥ್ಯವಿರುವ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸುಮಾರು ಎರಡು, ಮೂರು ಲಕ್ಷ ಅಭಿಮಾನಿಗಳು ಏಕಾ ಏಕಿ ಜಮಾಯಿಸಿದ ಕಾರಣದಿಂದ ನೂಕುನುಗ್ಗಲು ಹಾಗೂ ಕಾಲ್ತುಳಿತ ಸಂಭವಿಸಿದೆ. ಇದನ್ನು ನಿರೀಕ್ಷೆ ಮಾಡಿರಲಿಲ್ಲ. ಇದರಲ್ಲಿ 11 ಜನ ಸಾವನ್ನಪ್ಪಿದ್ದಾರೆ. 33 ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂಬ ಮಾಹಿತಿಯನ್ನು ನೀಡಿದರು.

“ಮೃತರೆಲ್ಲರೂ ಯುವಕರು ಮತ್ತು ಯುವತಿಯರಾಗಿರುವುದರಿಂದ ಅವರೆಲ್ಲರಿಗೂ ತಲಾ 10 ಲಕ್ಷ ರೂ.ಗಳು ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ವೆಚ್ಚೆಗಳನ್ನು ಸರ್ಕಾರವೇ ಭರಿಸಲಿದೆ. ಈ ಸಂಭ್ರಮಾಚರಣೆಗೆ ಬಂದೋಬಸ್ತ್ ನೀಡುವುದಷ್ಟೇ ನಮ್ಮ ಕೆಲಸವಾಗಿತ್ತು. ಈ ದುರ್ಘಟನೆಯ ಹೊಣೆಯನ್ನು ಕ್ರಿಕೆಟ್ ಅಸೋಸಿಯೇಷನ್ ಅವರೇ ಹೊರಬೇಕು” ಎಂದ ಅವರು, “ಈ ದುರ್ಘಟನೆಗೆ ಕಾರಣರಾದವರನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ಏರ್ಪಡಿಸಲಾಗಿದೆ” ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ, ವಿರೋಧಪಕ್ಷವಾದ ಬಿಜೆಪಿ ಈ ದುರಂತ ಘಟನೆಯನ್ನು ರಾಜಕೀಯಕ್ಕೆ ಬಳಸಿಕೊಂಡು ಸರ್ಕಾರವನ್ನು ನಿಂದಿಸುತ್ತಿರುವುದು ನಾಚಿಕೆಗೇಡು. ಎಂದಿನಂತೆ ಸಾವಿನ ಮೇಲೆ ರಾಜಕಾರಣ ಮಾಡುವ ಬಿಜೆಪಿ ನಾಯಕರಿಗೆ ಇದು ಶೋಭೆ ತರುವುದಿಲ್ಲ. ಈ ವಿಚಾರದಲ್ಲಿ ಸರ್ಕಾರವನ್ನು ನಿಂದಿಸುವುದನ್ನು ಬಿಟ್ಟು, ಅಂದ ಕ್ರಿಕೆಟ್ ಅಭಿಮಾನಿಗಳಿಗೆ ಬುದ್ಧಿವಾದ ಹೇಳುವ ಮೂಲಕ ವಿರೋಧಪಕ್ಷಗಳು ಜವಾಬ್ದಾರಿಯಿಂದ ವರ್ತಿಸುವ ಕೆಲಸವನ್ನು ಮಾಡಬೇಕು.

ಅಭಿಮಾನಿಗಳು ಆಟವನ್ನು ಆಟದಂತೆ ನೋಡಬೇಕೆ ವಿನಃ ಹುಚ್ಚರಂತೆ ವರ್ತಿಸಿಬಾರದು. ಈ ಘಟನೆಯಿಂದ ಎಲ್ಲರಿಗೂ ನೋವಾಗಿದೆ. ಅಭಿಮಾನ ಎಂಬುದು ಬೇರೆ, ಶಿಸ್ತು ಎಂಬುದು ಬೇರೆ. ಕ್ರೀಡಾಭಿಮಾನಿಗಳು ಯಾವಾಗಲೂ ಶಿಸ್ತುಬದ್ಧವಾಗಿರಬೇಕು. ಈ ದುರಂತಕ್ಕೆ ಯಾರೂ ಹೊಣೆಯಲ್ಲ. ಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳಿಗಳ ಅಂಧ ಭಕ್ತಿ ಮತ್ತು ಅಶಿಸ್ತುವೇ ಕಾರಣ.

Tags: Chinnaswamy Stadium TragedyRCBಆರ್.ಸಿ.ಬಿಕ್ರಿಕೆಟ್ಚಿನ್ನಸ್ವಾಮಿ ಸ್ಟೇಡಿಯಂ ದುರಂತಬಿಜೆಪಿವಿರೋಧ ಪಕ್ಷಸಿದ್ದರಾಮಯ್ಯ
Previous Post

BBC ವರದಿ: ಕಮಲ್ ಹಾಸನ್ ಹೇಳುವಂತೆ ಕನ್ನಡ ತಮಿಳಿನಿಂದ ಹುಟ್ಟಿತೇ? ಭಾಷಾಶಾಸ್ತ್ರಜ್ಞರು ಏನು ಹೇಳುತ್ತಾರೆ?

Next Post

ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ!

Next Post
ಬದುಕಿ ಬಾಳಬೇಕಿದ್ದ ನಮ್ಮ ಮನೆಯ ಮಕ್ಕಳು ಕಾಲ್ತುಳಿತಕ್ಕೆ ಬಲಿಯಾಗಿರುವುದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ದುರ್ಘಟನೆಯಲ್ಲಿ ಮೃತಪಟ್ಟವರು ನಮ್ಮ ಮನೆಯವರೇ ಮೃತಪಟ್ಟಿದ್ದಾರೆ ಎಂಬ ನೋವು ರಾಜ್ಯದಲ್ಲಿ ತುಂಬಿದೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS