• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಅಪರಾಧ: ಸಿದ್ದರಾಮಯ್ಯ

ಪ್ರತಿ ಮಹಿಳೆಯೂ ಸುರಕ್ಷಿತವಾಗಿ, ಗೌರವದಿಂದ ಮತ್ತು ಸ್ವಾತಂತ್ರ್ಯದಿಂದ ಬದುಕುವ ಶ್ರೇಷ್ಠ ಕರ್ನಾಟಕವನ್ನು ನಿರ್ಮಿಸೋಣ.

by Dynamic Leader
10/07/2025
in ರಾಜ್ಯ
0
ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ
0
SHARES
24
VIEWS
Share on FacebookShare on Twitter

ಬೆಂಗಳೂರು: “ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್‌ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ನಮ್ಮ ಕರ್ನಾಟಕದ ಪರಂಪರೆಯಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಕಳೆದ ಕೆಲವು ದಿನಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿದ್ದು, ತಕ್ಷಣವೇ ಕೃತ್ಯ ಎಸಗಿದವರನ್ನು ಬಂಧಿಸುವುದು ಸೇರಿದಂತೆ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಸರ್ಕಾರ ಜರುಗಿಸಿದೆ. ಇದರ ಜೊತೆಗೆ ನಾವು ಇಂತಹ ಕೃತ್ಯಗಳ ಮೇಲೆ ತೀವ್ರ ನಿಗಾ ವಹಿಸಿದ್ದೇವೆ” ಎಂದು ಹೇಳಿದ್ದಾರೆ.

“ಮಹಿಳೆಯರು ಕೀಳುದೃಷ್ಟಿಯ ಅಥವಾ ಯಾವುದೇ ತರನಾದ ಕಿರುಕುಳಗಳ ಭಯವಿಲ್ಲದೆ ಧೈರ್ಯವಾಗಿ ನಡೆಯಲಾರದ ಸ್ಥಿತಿಗೆ ನಮ್ಮ ಸಮಾಜ ಹೋಗುತ್ತಿದೆ ಎಂದಾದರೆ, ನಾಗರಿಕರಾಗಿ ನಾವು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದೇವೆ? ಎಂಬುದನ್ನು ಎಲ್ಲರೂ ತಮ್ಮ ಆತ್ಮಸಾಕ್ಷಿಯನ್ನೊಮ್ಮೆ ಪ್ರಶ್ನಿಸಿಕೊಳ್ಳಬೇಕಿದೆ. ಇವು ನಮ್ಮ ಸಾಮಾಜಿಕ ಮೌಲ್ಯಗಳಿಗೆ ವಿರುದ್ಧವಾದವು ಮಾತ್ರವಲ್ಲ, ಕಾನೂನಿನ ರೀತಿಯಲ್ಲಿ ಶಿಕ್ಷಾರ್ಹ ಅಪರಾಧಗಳ ಕೂಡ ಹೌದು” ಎಂದಿದ್ದಾರೆ.

“ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ ಮತ್ತು ಘನತೆ ನಮ್ಮ ಸರ್ಕಾರದ ಆಧ್ಯತೆಯಾಗಿದೆ. ನಿಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆಗೆ ನಾವು ಬದ್ಧರಿದ್ದೇವೆ ಎಂಬುದನ್ನು ನಾಡಿನ ನನ್ನ ಎಲ್ಲಾ ತಾಯಂದಿರಿಗೆ, ಅಕ್ಕತಂಗಿಯರಿಗೆ ತಿಳಿಸಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

“ಯಾರೇ ಆಗಲಿ ಮಹಿಳೆಯರ ಘನತೆಗೆ ಚ್ಯುತಿಯುಂಟು ಮಾಡುವ ವಿಡಿಯೋಗಳು ಅಥವಾ ಖಾತೆಗಳನ್ನು ಆನ್‌ಲೈನ್‌ನಲ್ಲಿ ನೋಡಿದರೆ, ತಕ್ಷಣವೇ ಸೈಬರ್ ಸೆಲ್‌ನ ದೂರವಾಣಿ ಸಂಖ್ಯೆ: 1930ಗೆ ಕರೆಮಾಡಿ ಅಥವಾ ವೆಬ್‌ಸೈಟ್: http://cybercrime.gov.in ನಲ್ಲಿ ದೂರು ದಾಖಲಿಸಿ” ಎಂದು ಮನವಿ ಮಾಡಿದ್ದಾರೆ.

“ನಾವು ನೀವೆಲ್ಲರೂ ಜೊತೆಗೂಡಿ ಪ್ರತಿ ಮಹಿಳೆಯೂ ಸುರಕ್ಷಿತವಾಗಿ, ಗೌರವದಿಂದ ಮತ್ತು ಸ್ವಾತಂತ್ರ್ಯದಿಂದ ಬದುಕುವ ಶ್ರೇಷ್ಠ ಕರ್ನಾಟಕವನ್ನು ನಿರ್ಮಿಸೋಣ”  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Tags: ಕರ್ನಾಟಕದ ಪರಂಪರೆಕಾನೂನು ಕ್ರಮಜಾಲತಾಣಮಹಿಳೆವಿಡಿಯೋ ಚಿತ್ರೀಕರಣಸಾರ್ವಜನಿಕ ಸ್ಥಳ
Previous Post

ಧರ್ಮರಾಯನಂತೆ ಆಸ್ತಿ-ಅಧಿಕಾರಕ್ಕಾಗಿ ದ್ರೌಪದಿಯನ್ನೇ ಜೂಜಿನಲ್ಲಿಡುವ ಸಂಸ್ಕೃತಿ ಕಾಂಗ್ರೆಸ್ ಪಕ್ಷದಲ್ಲಂತೂ ಇಲ್ಲ: ಬಿ.ಕೆ.ಹರಿಪ್ರಸಾದ್!

Next Post

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

Next Post
ಗುಜರಾತ್ನ ವಡೋದರಾ ಮತ್ತು ಆನಂದ್ ಜಿಲ್ಲೆಗಳನ್ನು ಸಂಪರ್ಕಿಸುವ ಮಹಿಸಾಗರ್ ನದಿಗೆ ಅಡ್ಡಲಾಗಿ 900 ಮೀಟರ್ ಉದ್ದದ ಸೇತುವೆಯ ಒಂದು ಭಾಗ ಇತ್ತೀಚೆಗೆ ಕುಸಿದಿದೆ.

ಗುಜರಾತ್ ಮಾದರಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಜಿಗ್ನೇಶ್ ಮೇವಾನಿ ಆರೋಪ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS