• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಇತರೆ ಸುದ್ಧಿಗಳು

ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು! – ಸಿದ್ದರಾಮಯ್ಯ

'ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಿಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು.

by Dynamic Leader
21/07/2025
in ಇತರೆ ಸುದ್ಧಿಗಳು
0
ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿದ್ದ ಮೇಲ್ಮನವಿಯನ್ನು ಮಾಡಿದ ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ

0
SHARES
69
VIEWS
Share on FacebookShare on Twitter

ಬೆಂಗಳೂರು: “ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

“ಸುಪ್ರೀಂಕೋರ್ಟ್ ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

“ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ” ಎಂದು ಕಿಡಿಕಾರಿದ್ದಾರೆ.

“ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾದ ಗೌರವಾನ್ವಿತ ಗವಾಯಿ ಅವರು ಹೇಳಿದ್ದಾರೆ. ‘ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಿಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ” ಎಂದು ಹೇಳಿದ್ದಾರೆ.

ವಿಡಿಯೊ ವೀಕ್ಷಿಸಲು ಕ್ಲಿಕ್ ಮಾಡಿ: ತಿರುಪತಿಗೆ ಹೋಗಿ ಗುಂಡೊಡಿಸ್ಕೊಂಡ್ರೆ ಮನೆ ಸಿಗುತ್ತಾ? ಮಾವಳ್ಳಿ ಶಂಕರ್

“ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ” ಎಂದು ಹೇಳಿದ್ದಾರೆ.

“ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು” ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು” ಎಂದು ಒತ್ತಾಯಿಸಿದ್ದಾರೆ.

Tags: Muda Case DismissedSiddaramaiahSupreme Courtಬಿಜೆಪಿಮುಖಭಂಗಮುಡಾ ಪ್ರಕರಣ ವಜಾಸಿದ್ದರಾಮಯ್ಯಸುಪ್ರೀಂ ಕೋರ್ಟ್
Previous Post

ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ, ಎಂ.ಕೆ. ಸ್ಟಾಲಿನ್ ಹಾಗೂ ಡಿ.ಕೆ.ಶಿವಕುಮಾರ್

Next Post

V.S.Aachuthanandan: ಕೇರಳದ ಮಾಜಿ ಮುಖ್ಯಮಂತ್ರಿ ಅಚ್ಯುತಾನಂದನ್ ನಿಧನ!

Next Post
ಕೇರಳದ ಮಾಜಿ ಮುಖ್ಯಮಂತ್ರಿ ಅಚ್ಯುತಾನಂದನ್ (101) ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ.

V.S.Aachuthanandan: ಕೇರಳದ ಮಾಜಿ ಮುಖ್ಯಮಂತ್ರಿ ಅಚ್ಯುತಾನಂದನ್ ನಿಧನ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026

2029ರ ಲೋಕಸಭಾ ಚುನಾವಣೆಗೆ ಮುನ್ನ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

14/09/2026

ವಿಜಯ್ ನೇತೃತ್ವದ ಟಿವಿಕೆ ಸರ್ಕಾರಕ್ಕೆ ಹೊರಗಿನಿಂದ ಬೆಂಬಲ ನೀಡುತ್ತಿರುವ ಕಮ್ಯುನಿಸ್ಟ್ ಪಕ್ಷಗಳು ಉಪ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ!

13/09/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಇಸ್ಲಾಂ ಮತ್ತು ಪೆರಿಯಾರ್

18/09/2026

‘PayTM’ ಅಂದ್ರೆ ‘Pay To Modi’ ಎಂದಿದ್ದ ರಾಹುಲ್ ಗಾಂಧಿ; 10 ವರ್ಷಗಳ ಬಳಿಕ ಮತ್ತೆ ಚರ್ಚೆಗೆ!

17/09/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS