• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಚಾಲನೆ!

ಯೋಜನೆಗೆ ಭೂಸ್ವಾಧೀನಪಡಿಸಿಕೊಳ್ಳಲು ರೈತರ ಮನವೊಲಿಸುವುದಾಗಿ ಸಂಬಂಧಪಟ್ಟ ಸಚಿವರು, ಶಾಸಕರು, ರೈತಮುಖಂಡರು ತಿಳಿಸಿದ್ದಾರೆ.

by Dynamic Leader
16/09/2025
in ರಾಜಕೀಯ
0
0
SHARES
15
VIEWS
Share on FacebookShare on Twitter

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ 3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

“ನಮ್ಮ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ನಾವು ಕೈಗೊಂಡಿದ್ದೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

“ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಅನುಮತಿ ನೀಡಲಾಗಿದೆ. ಜಲಾಶಯದ ಎತ್ತರವನ್ನು ಹೆಚ್ಚಿಸುವುದರಿಂದ ಆಲಮಟ್ಟಿಯ ಹಿನ್ನೀರಿನಿಂದ ಸುಮಾರು 75,000 ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಇದರಿಂದ 5.94 ಲಕ್ಷ ಹೆಕ್ಟೇರ್ (ಸುಮಾರು 14 ರಿಂದ 15 ಲಕ್ಷ ಎಕರೆ) ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ. ಯುಕೆಪಿ ಹಂತ 3 ಬೃಹತ್ ನೀರಾವರಿ ಯೋಜನೆಯಾಗಿದ್ದು, ಈ ಭಾಗದ ರೈತರ ಜಮೀನಿಗೆ ನೀರೊದಗಿಸಿ, ಅವರ ಜೀವನ ಮಟ್ಟದ ಸುಧಾರಿಸಲು ನಾವು ಪಣತೊಟ್ಟಿದ್ದೇವೆ” ಎಂದು ಹೇಳಿದರು.

“ಇಂದು ನಡೆದ ವಿಶೇಷ ಸಂಪುಟ ಸಭೆಯಲ್ಲಿ ಈ  ಯೋಜನೆಗೆ ಸಂಬಂಧಿಸಿದಂತೆ ರೈತರು, ರೈತ ಹೋರಾಟ ಸಂಘಗಳು, ಸಂಬಂಧಪಟ್ಟ ಶಾಸಕರು, ಸಚಿವರೊಂದಿಗೆ ಚರ್ಚೆ ನಡೆಸಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಯೋಜನೆಗೆ ರೈತರಿಂದ ಸ್ವಾಧೀನಪಡಿಸಿಕೊಳ್ಳುವ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ, ಖುಷ್ಕಿ ಒಣಭೂಮಿಯ ಎಕರೆಯೊಂದಕ್ಕೆ 30 ಲಕ್ಷ ಪರಿಹಾರವನ್ನು ನೀಡಬೇಕೆಂದು ಸಚಿವ ಸಂಪುಟ ತೀರ್ಮಾನಿಸಿದೆ” ಎಂದರು.

“ಕಾಲುವೆ ತೋಡಲು ಸುಮಾರು 51,837 ಎಕರೆ  ಬೇಕಾಗಿದ್ದು, ಇದರಲ್ಲಿ 23,631 ಎಕರೆ ಭೂಮಿಯ ಸ್ವಾಧೀನ ಪ್ರಕ್ರಿಯೆ ನಡೆಸಿ, ಕಾಮಗಾರಿ ಕೈಗೊಳ್ಳಲಾಗಿದೆ. ಕಾಲುವೆ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿಗೆ ಸಂಬಂಧಿಸಿದಂತೆ ಒಣಭೂಮಿಯ ಎಕರೆಯೊಂದಕ್ಕೆ 25 ಲಕ್ಷ ಹಾಗೂ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 30 ಲಕ್ಷ ಪರಿಹಾರ ಒದಗಿಸಲು ತೀರ್ಮಾನಿಸಲಾಗಿದೆ. ಕಾಲುವೆ ನಿರ್ಮಾಣದಲ್ಲಿ ಜಮೀನು ಕಳೆದುಕೊಂಡವರು ಯೋಜನೆಯ ಫಲಾನುಭವಿಗಳಾಗುತ್ತಾರೆ” ಎಂದು ಹೇಳಿದರು.

“ಭೂಸ್ವಾಧೀನಪಡಿಸಿಕೊಂಡ ಜಮೀನುಗಳಿಗೆ ಪರಿಹಾರವನ್ನು ಮೂರು ಆರ್ಥಿಕ ವರ್ಷದೊಳಗೆ ನೀಡಲು ತೀರ್ಮಾನಿಸಲಾಗಿದೆ. ಯೋಜನೆಗೆ ಭೂಸ್ವಾಧೀನಪಡಿಸಿಕೊಳ್ಳಲು ರೈತರ ಮನವೊಲಿಸುವುದಾಗಿ ಸಂಬಂಧಪಟ್ಟ ಸಚಿವರು, ಶಾಸಕರು, ರೈತಮುಖಂಡರು ತಿಳಿಸಿದ್ದಾರೆ. ರಾಜ್ಯದ ಜನರಿಗೆ ಒಳಿತು ಮಾಡುವ ಈ ಸಾರ್ಥಕ ಯೋಜನೆಗೆ ಭೂಮಿ ನೀಡಲು ರೈತರು ಸಮ್ಮತಿಸಬಹುದೆಂಬ ಭರವಸೆಯಿದೆ. ಇದೊಂದು ಐತಿಹಾಸಿಕ ತೀರ್ಮಾನ. 2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಹಾರದ ಮೊತ್ತ ಕಡಿಮೆಯಿದ್ದುದ್ದರಿಂದ ಯಾವ ರೈತರೂ ಭೂಮಿ ನೀಡಲು ಒಪ್ಪಲಿಲ್ಲ ಹಾಗೂ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು” ಎಂದು ಹೇಳಿದರು.

“ಈ ಹಿಂದೆ ಬೆಳಗಾವಿಯಲ್ಲಿ ಉತ್ತರ ಕರ್ನಾಟಕದ ಶಾಸಕರು, ರೈತಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಒಂದೇ ಬಾರಿಗೆ ಕನ್ಸೆಂಟ್ ಅವಾರ್ಡ್ ನೀಡುವ ಬಗ್ಗೆ ಪರಿಗಣಿಸಿದ್ದರೂ, ಪರಿಹಾರಧನ ನಿಗದಿಯಾಗಿರಲಿಲ್ಲ. ನಮ್ಮದು ಎಂದೆಂದಿಗೂ ನುಡಿದಂತೆ ನಡೆಯುವ ಸರ್ಕಾರ. ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಆದ್ಯತೆ ನೀಡುತ್ತದೆ. ಆದರೆ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಇದುವರೆಗೂ ಅಧಿಸೂಚನೆ ಹೊರಡಿಸಿಲ್ಲ. ಯೋಜನೆಯ ತ್ವರಿತ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಅಧಿಸೂಚನೆ ಹೊರಡಿಸಲು ಕೇಂದ್ರವನ್ನು ಹಲವು ಬಾರಿ ಭೇಟಿ ಮಾಡಿ ಅಧಿಸೂಚನೆ ಹೊರಡಿಸುವಂತೆ ಒತ್ತಾಯಿಸಲಾಗಿದೆ” ಎಂದರು.

“1,33,867 ಎಕರೆ ಜಮೀನು ಯೋಜನೆಗೆ ಬೇಕಾಗಿದ್ದು, 75,563 ಎಕರೆ ಮುಳುಗಡೆಯಾಗಲಿದೆ. 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆ ಕಾರ್ಯಗಳಿಗೆ 6,469 ಎಕರೆಗಳ ಅವಶ್ಯಕತೆಯಿದೆ. ಇದರಿಂದ ಸುಮಾರು 20 ಗ್ರಾಮಗಳು, ಕೆಲವು ಪಟ್ಟಣದ ವಾರ್ಡ್ ಗಳು ಮುಳುಗಡೆಯಾಗುತ್ತಿದ್ದು, ಒಟ್ಟು 1,33,867 ಎಕರೆಗೆ ಭೂಸ್ವಾಧೀನ ಪರಿಹಾರ ನೀಡುವ ಐತಿಹಾಸಿಕ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಈ ಉದ್ದೇಶಕ್ಕಾಗಿ ಪ್ರತಿವರ್ಷ ಸುಮಾರು 15 ರಿಂದ 20 ಸಾವಿರ ಕೋಟಿ ರೂ.ಗಳ ವೆಚ್ಚ ಬರಲಿದೆ. ಒಟ್ಟಾರೆ ಈ ಯೋಜನೆಗೆ ಸುಮಾರು 70 ಸಾವಿರ ಕೋಟಿ ರೂ.ಗಳು ವೆಚ್ಚವಾಗುವ ಅಂದಾಜು ಇದೆ” ಎಂದು ಹೇಳಿದರು.

Tags: Krishna Upper River ProjectSiddaramaiahಕೃಷ್ಣಾ ಮೇಲ್ದಂಡೆ ಯೋಜನೆವಿಶೇಷ ಸಚಿವ ಸಂಪುಟ ಸಭೆಸಿದ್ದರಾಮಯ್ಯ
Previous Post

ಕಲ್ಯಾಣ ಕರ್ನಾಟಕದ ಜನತೆಗಾಗಿ ನಾಳೆ 32 ಹೊಸ ಆಂಬ್ಯುಲೆನ್ಸ್‌ಗಳನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ: ಸಿದ್ದರಾಮಯ್ಯ

Next Post

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

Next Post

ಪ್ರಧಾನಿ ಮೋದಿ ಹುಟ್ಟುಹಬ್ಬ ನಮಗೆ ಕರಾಳ ದಿನ: ಕಾಂಗ್ರೆಸ್ ಸಂಸದೆ ವಾಗ್ದಾಳಿ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS