• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜಕೀಯ

ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ; ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ: ಸಿದ್ದರಾಮಯ್ಯ

ಶಾಲಾ-ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ  ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ.

by Dynamic Leader
20/10/2025
in ರಾಜಕೀಯ
0
0
SHARES
42
VIEWS
Share on FacebookShare on Twitter

ಪುತ್ತೂರು: “ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ-ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ  ಆರ್.ಎಸ್.ಎಸ್ ಎಂದು ಎಲ್ಲಿಯೂ ಉಲ್ಲೇಖವಾಗಿಲ್ಲ: ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಶಾಸಕ ಅಶೋಕ್‌ ಕುಮಾರ್‌ ರೈ ನೇತೃತ್ವದಲ್ಲಿ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಶೋಕ ಜನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂ.1 ಇತ್ತು. ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ” ಎಂದರು.

“ಬದುಕಲು ಸ್ವಾರ್ಥ ಹೆಚ್ಚಾಗಿದೆ. ಎಲ್ಲ ವಿಚಾರಗಳಿಗೂ ಜಾತಿ ಜಾತಿ ಎನ್ನುವವರು ಜೀವದ ವಿಚಾರ ಬಂದಾಗ ಮಾತ್ರ ಬೇರಾಗಿ ಬಿಡುತ್ತಾರೆ. ಆಸ್ಪತ್ರೆಯಲ್ಲಿ ಜೀವ ಉಳಿದರೆ ಸಾಕು.. ಯಾರ ರಕ್ತವನ್ನಾದರೂ ನೀಡಿ ಎನ್ನುತ್ತಾನೆ. ಮನುಷ್ಯ ಸ್ವಾರ್ಥಿಯಾಗುತ್ತಿದ್ದಾನೆ. ರಾಜ್ಯದ ಅಭಿವೃದ್ಧಿಗಾಗಿ ಕೋಮು ಸಾಮರಸ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ” ಎಂದು ಸಿದ್ದರಾಮಯ್ಯ ಹೇಳಿದರು.

ಇದೇ ವೇಳೆ “ಈ ಹಿಂದೆ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುತ್ತೇವೆ” ಎಂದರು. “ಕೆಲವರು ನಮ್ಮ ಸರ್ಕಾರದ 5 ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಿದ್ದಾರೆ. ಸರ್ಕಾರದ ಬಳಿ ದುಡ್ಡಿಲ್ಲ ಅಂತ, ದುಡ್ಡಿಲ್ಲದಿದ್ದರೆ ಪುತ್ತೂರಿಗೆ ಮೆಡಿಕಲ್ ಕಾಲೇಜ್ ಕೊಡೋಕೆ ಆಗ್ತಿತ್ತಾ”? ಎಂದರು.

ಅಂತೆಯೇ “ಜಾತಿ, ಧರ್ಮದ ಹೆಸರಿನಲ್ಲಿ ಜಗಳ ಮಾಡೋದ್ರಲ್ಲಿ ನಿಮ್ಮ ಜಿಲ್ಲೆ ನಂಬರ್ ಒನ್ ಇತ್ತು. ಆದರೆ ಈಗ ಅದಕ್ಕೆ ನಮ್ಮ ಸರ್ಕಾರ ಸಂಪೂರ್ಣ ಕಡಿವಾಣ ಹಾಕಿದೆ. ಇಲ್ಲಿ ಎತ್ತಿಕಟ್ಟೋರ ಮಕ್ಕಳು ಯಾರೂ ಈ ಜಗಳದಲ್ಲಿ ಇರಲ್ಲ. ಮೇಲ್ಜಾತಿ, ಶ್ರೀಮಂತರ ಮಕ್ಕಳು ಯಾರೂ ಸಾಯಲ್ಲ. ನಾನು ಯಾರ ಮಾತನ್ನೂ ಕೇಳಿಲ್ಲ. ಕಮಿಷನರ್, ಎಸ್ಪಿ ದಕ್ಷರನ್ನ ನೇಮಕ ಮಾಡಿದೆ. ಈಗ ಸುಧಾರಣೆ ಆಗಿಲ್ವಾ? ದಕ್ಷ ಅಧಿಕಾರಿಗಳು ಇದ್ರೆ ಬದಲಾವಣೆ ಸಾಧ್ಯ. ಯಾವತ್ತಿಗೂ ನಾವು ಅಮಾಯಕರ ಮಕ್ಕಳನ್ನ ಸಾಯಿಸೋ ಕೆಲಸ ಮಾಡಬಾರದು. ಬೇರೆ ಧರ್ಮದವರನ್ನ ದ್ವೇಷ ಮಾಡೋ ಕೆಲಸ ಮಾಡಬಾರದು” ಎಂದರು.

“ನಮ್ಮ ಸಮಾಜದಲ್ಲಿ ಅನೇಕ ಜಾತಿ ಮತ್ತು ಧರ್ಮಗಳಿವೆ. ಯಾವ ಧರ್ಮವೂ ದ್ವೇಷ ಮಾಡಿ ಅಂತ ಯಾರಿಗೂ ಹೇಳಲ್ಲ. ಪ್ರತಿಯೊಬ್ಬನ ಪ್ರೀತಿಸಿ ಅಂತ ಹೇಳುತ್ತೆ. ವೈವಿಧ್ಯತೆಯಲ್ಲಿ ಏಕತೆ ಮಾಡಿಕೊಳ್ಳಬೇಕು. ಧರ್ಮದ ತತ್ವ, ಆದರ್ಶ ಪಾಲನೆ ಮಾಡಲಿ. ಸರ್ವ ಜನಾಂಗದ ಶಾಂತಿಯ ತೋಟದ ಬದಲು ದ್ವೇಷ, ಕಚ್ಚಾಟ ಇರಬಾರದು” ಎಂದು ಹೇಳಿದರು.

“ಪ್ರತಿಯೊಬ್ಬ ವ್ಯಕ್ತಿ ಮನುಷ್ಯರಾಗೋಕೆ ಪ್ರಯತ್ನ ಮಾಡಬೇಕು. ಕೋಮು ಸೌಹಾರ್ದತೆ ಇದ್ದರೆ ರಾಜ್ಯ, ಜಿಲ್ಲೆ ಅಭಿವೃದ್ಧಿಯಾಗುತ್ತೆ. ಅದಕ್ಕಾಗಿ ನಾವು ಕೋಮು ಸೌಹಾರ್ದ ಕಾಪಾಡಬೇಕಿದೆ. ದಕ್ಷಿಣ ಕನ್ನಡ ಜಿಲ್ಲೆ ಕೋಮು ಸೌಹಾರ್ದಕ್ಕೆ ವಿಶೇಷ ಗಮನ ಕೊಡಬೇಕು. ಸುಳ್ಳು ಹೇಳಿದ್ರೆ ಕಾನೂನು ತಂದು ಕೇಸ್ ಹಾಕ್ತೀವಿ. ಪ್ರಿಯಾಂಕ್ ಖರ್ಗೆ ಮತ್ತು ಹೆಚ್‌.ಕೆ ಪಾಟೀಲ್ ಆ ಕೆಲಸದಲ್ಲಿ ತೊಡಗಿದ್ದಾರೆ” ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

“ಸಮಾಜದಲ್ಲಿ ಶ್ರೀಮಂತರು, ಬಡವರು, ಮೇಲ್ಜಾತಿ, ಕೆಳ ಜಾತಿ ಎಲ್ಲರೂ ಇದ್ದಾರೆ. ಸಮಾನತೆಯ ಸಮ ಸಮಾಜ ನಿರ್ಮಾಣವಾಗಲು ಉಳ್ಳವರು ಇಲ್ಲದೇ ಇರೋರಿಗೆ ಸಹಾಯ ಮಾಡಬೇಕು. ಬಸವಣ್ಣ ಕೂಡ ಕಾಯಕ ಮತ್ತು ದಾಸೋಹದ ಬಗ್ಗೆ ಹೇಳಿದ್ದಾರೆ. ನಮ್ಮಲ್ಲಿ ಅಸಮಾನತೆ, ತಾರತಮ್ಯ ಇದೆ, ಇಲ್ಲಿ ಸಮ ಸಮಾಜ ನಿರ್ಮಾಣ ಆಗಬೇಕು. ನಾನು ಎಲ್ಲಾ ಶಾಲೆಗಳಲ್ಲಿ ಸಂವಿಧಾನದ ಪೀಠಿಕೆ ಓದಿಸ್ತಾ ಇದ್ದೇನೆ. ಸಂವಿಧಾನ ಅರಿಯದೇ ಇದ್ದರೆ ಸಮ ಸಮಾಜ ನಿರ್ಮಾಣ ಅಸಾಧ್ಯ” ಎಂದು ತಿಳಿಸಿದರು.

“ಆದೇಶದಲ್ಲಿ ಯಾವುದೇ ನಿರ್ದಿಷ್ಟ ಸಂಘ ಅಥವಾ ಸಂಸ್ಥೆ ಎಂದು ಇಲ್ಲ. ಬಿಜೆಪಿ ಸರ್ಕಾರ ಆದೇಶ ಮಾಡಿದ್ದನ್ನೇ ನಾವು ಪುನರುಚ್ಚರಿಸಿದ್ದೇವೆ. ಅವರು ಮಾಡಬಹುದು, ನಾವು ಮಾಡಬಾರದೇ”? ಎಂದು ಪ್ರಶ್ನಿಸಿದರು.

“2013ರಲ್ಲಿ ಜಗದೀಶ ಶೆಟ್ಟರ್ ಅವರು ಮುಖ್ಯಮಂತ್ರಿಗಳಿದ್ದ ಸಂದರ್ಭದಲ್ಲಿ ಸಂಘ ಸಂಸ್ಥೆಗಳು ಶಾಲಾ ಕಾಲೇಜು ಆವರಣದಲ್ಲಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಿದ್ದರು. ಜಗದೀಶ್ ಶೆಟ್ಟರ್ ಅವರು ಶಿಕ್ಷಣ ಇಲಾಖೆ ಆದೇಶ ಮಾಡಿತ್ತು ನಾನಲ್ಲ ಎಂದಿದ್ದಾರೆ. ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಆದೇಶ ಹೊರಡಿಸಿದ್ದಾರೆ” ಎಂದು ಹೇಳಿದರು.

ಸಂಘ ಸಂಸ್ಥೆಗಳಿಗೆ ಅನುಮತಿ ಕೊಡಲೇಬೇಕು ಎಂದು ಏನಿಲ್ಲ. ಶಾಂತಿ ಸುವ್ಯವಸ್ಥೆ ಮೇಲೆ ಬೀರುವ ಪರಿಣಾಮವನ್ನು ಯೋಚಿಸಿ ಅನುಮತಿ ನೀಡುವುದು, ಬಿಡುವುದು ಅವಲಂಬಿತವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Tags: Ashoka Jana Mana 2025PutturRSS banSiddaramaiahಅಶೋಕ ಜನಮನ ಕಾರ್ಯಕ್ರಮಆರ್.ಎಸ್.ಎಸ್ ನಿಷೇಧಪುತ್ತೂರುಸಿದ್ದರಾಮಯ್ಯ
Previous Post

Sundar Pichai: “ದಕ್ಷಿಣ ಭಾರತದ ರೈಲು ಪ್ರಯಾಣ; ‘AI hub’ ಒಂದು ದೊಡ್ಡ ಹೂಡಿಕೆ” – ಸುಂದರ್ ಪಿಚೈ

Next Post

ಔಷಧಿಗಳು ಮತ್ತು ಮಾತ್ರೆಗಳ ಬಗ್ಗೆ ನಾವು ತಿಳಿದುಕೊಳ್ಳಲೇಬೇಕಾದ 6 ವಿಷಯಗಳು!

Next Post

ಔಷಧಿಗಳು ಮತ್ತು ಮಾತ್ರೆಗಳ ಬಗ್ಗೆ ನಾವು ತಿಳಿದುಕೊಳ್ಳಲೇಬೇಕಾದ 6 ವಿಷಯಗಳು!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS