• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ಬಸವಣ್ಣನವರ ನಾಡಿನಲ್ಲಿ ಇಂದಿಗೂ ಮೌಢ್ಯಗಳು ಹಾಗೂ ಕಂದಾಚಾರಗಳನ್ನು ಆಚರಿಸುತ್ತಿರುವುದು ನಿಜಕ್ಕೂ ದುರ್ದೈವಕರ ಸಂಗತಿ!

ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಬೆಳೆಸುವುದೇ ವಿಜ್ಞಾನದ ಮೂಲ ಉದ್ದೇಶ.

by Dynamic Leader
13/12/2025
in ರಾಜ್ಯ
0
0
SHARES
3
VIEWS
Share on FacebookShare on Twitter

ಗದಗ: ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ನಡೆದ ಭಾರತ ರತ್ನ ಪ್ರೊ.ಸಿ.ಎನ್.ಆರ್.ರಾವ್ ಅವರ 10ನೇ ವರ್ಷದ ವಿಜ್ಞಾನ ವಿಸ್ಕೃತ ಕಾರ್ಯಕ್ರಮ ಹಾಗೂ 2025ನೇ ಸಾಲಿನ ಪ್ರತಿಷ್ಠಿತ ಚಂದನ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು.

“ಬಸವಣ್ಣನವರ ನಾಡಿನಲ್ಲಿ ಜನಿಸಿದ ನಾವು ಇಂದಿಗೂ ಮೌಢ್ಯಗಳು ಹಾಗೂ ಕಂದಾಚಾರಗಳನ್ನು ಆಚರಿಸುತ್ತಿರುವುದು ನಿಜಕ್ಕೂ ದುರ್ದೈವಕರ ಸಂಗತಿ. ಮೌಢ್ಯ ಮತ್ತು ಅಂಧಶ್ರದ್ಧೆಗಳಿಗೆ ಅಂತ್ಯವಾಗಬೇಕು. ಭ್ರಾತೃತ್ವ, ಸ್ವಾತಂತ್ರ್ಯ ಮತ್ತು ಸಮಾನತೆ ಎಂಬ ಮೌಲ್ಯಗಳನ್ನು ನಮ್ಮ ಸಂವಿಧಾನ ನೀಡಿದೆ. ಅವುಗಳನ್ನು ಅಕ್ಷರಶಃ ಜಾರಿಗೆ ತರದೆ ಹೋದರೆ, ಜಾತಿ ವ್ಯವಸ್ಥೆಯೂ ಅಸಮಾನತೆಯೂ ನಿರ್ಮೂಲವಾಗುವುದಿಲ್ಲ. ಮಾನವರಾಗಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಶಿಕ್ಷಣ ಅತ್ಯಂತ ಅಗತ್ಯ” ಎಂದು ಹೇಳಿದರು.

“ಎಲ್ಲ ಧರ್ಮಗಳೂ ಮಾನವೀಯತೆಯನ್ನು ಬೋಧಿಸುತ್ತವೆ. ಆದರೆ ಪಟ್ಟಭದ್ರ ಹಿತಾಸಕ್ತಿಗಳು ಧರ್ಮವನ್ನು ತಪ್ಪಾಗಿ ಅರ್ಥೈಸಿ ಸಮಾಜವನ್ನು ದಾರಿ ತಪ್ಪಿಸುತ್ತಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ಅದನ್ನು ಹಣೆಬರಹವೆಂದು ಒಪ್ಪಿಕೊಂಡು ಸುಮ್ಮನಿರದೆ, ಇಚ್ಛಾಶಕ್ತಿ ಮತ್ತು ಶ್ರಮದೊಂದಿಗೆ ಪ್ರಯತ್ನಿಸಿದರೆ ಯಾವುದೇ ವರ್ಗದವರೂ ಸಾಧನೆ ಮಾಡಬಹುದು. ಶಿಕ್ಷಣವು ಯಾವುದೇ ಒಂದು ವರ್ಗಕ್ಕೆ ಸೀಮಿತವಾದುದಲ್ಲ. ಪ್ರಾಮಾಣಿಕ ಪ್ರಯತ್ನ ಮತ್ತು ಅವಕಾಶಗಳ ಸದುಪಯೋಗದ ಮೂಲಕ ಉನ್ನತ ಸ್ಥಾನಕ್ಕೆ ತಲುಪಲು ಸಾಧ್ಯ. ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಬೆಳೆಸುವುದೇ ವಿಜ್ಞಾನದ ಮೂಲ ಉದ್ದೇಶ” ಎಂದರು.

ಒಮ್ಮೆ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಬಿ.ಎಸ್.ಪಾಟೀಲರೊಂದಿಗೆ ಪ್ರವಾಸ ಮಾಡುವ ಅವಕಾಶ ನನಗೆ ದೊರೆತಿತ್ತು. ರೈತ ಕುಟುಂಬದಿಂದ ಬಂದ ಅವರು ವಿದ್ಯಾಭ್ಯಾಸ ಮಾಡಿ ಸೈನ್ಯ ಸೇರಿ, ನಂತರ ಐಎಎಸ್ ಅಧಿಕಾರಿಯಾಗಿದ್ದರು. ಅಪಘಾತದಿಂದ ಸಂಕಷ್ಟ ಎದುರಾದರೂ, ಅವರ ಅಚಲ ಇಚ್ಛಾಶಕ್ತಿಯಿಂದ ಐಎಎಸ್ ಉತ್ತೀರ್ಣರಾಗಲು ಸಾಧ್ಯವಾಯಿತು. ಅವರು ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದು, ಸದಾ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದರು. ನಾಡಿನ ಅಭಿವೃದ್ಧಿಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು” ಎಂದು ತಮ್ಮ  ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

“ಜೆ.ಎಚ್.ಪಟೇಲರ ಅವಧಿಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಅವರು ಬಹುಮುಖ್ಯ ಕೆಲಸಗಳನ್ನು ನಿರ್ವಹಿಸಿದರು. ಜೆ.ಎಚ್.ಪಟೇಲ್ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನ ವಿಭಜನೆಗಾಗಿ ಪಾಟೀಲರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಈಗಲೂ ಅವರ ಅಧ್ಯಕ್ಷತೆಯಲ್ಲಿಯೇ ಸಮಿತಿ ರಚನೆಯಾಗಿ ವರದಿ ಸಲ್ಲಿಸಲಾಗಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಐದು ಕಾರ್ಪೋರೇಷನ್‌ಗಳಾಗಿ ನಗರವನ್ನು ವಿಭಜಿಸಲಾಗಿದೆ. ಪಾಟೀಲರು ಈ ನಾಡಿಗೆ ಅಪಾರ ಸೇವೆ ಸಲ್ಲಿಸಿದ್ದಾರೆ. ಅವರನ್ನು ಗುರುತಿಸಿ ಚಂದನ ಎಜುಕೇಶನಲ್ ಸಂಸ್ಥೆ ಆಯ್ಕೆ ಮಾಡಿರುವುದು ಅತ್ಯಂತ ಸೂಕ್ತವಾಗಿದೆ” ಎಂದು ಹೇಳಿದರು.

“ಸಿ.ಎನ್.ಆರ್.ರಾವ್ ಅವರು ಈ ದೇಶ ಕಂಡ ಅಪರೂಪದ ವಿಜ್ಞಾನಿ. ಎಸ್‌ಎಸ್‌ಎಲ್‌ಸಿ ವರೆಗೆ ಕನ್ನಡ ಮಾಧ್ಯಮದಲ್ಲಿಯೇ ವಿದ್ಯಾಭ್ಯಾಸ ಮಾಡಿದವರು. ಪಾಟೀಲರು ಆಂಗ್ಲ ಮಾಧ್ಯಮದಲ್ಲಿ ಕಲಿತವರು. ಸಿ.ಎನ್.ಆರ್. ರಾವ್ ವಿಜ್ಞಾನ ಕ್ಷೇತ್ರದಲ್ಲಿ ಅಸಾಧಾರಣ ಎತ್ತರವನ್ನು ತಲುಪಿದವರು. ಸಂಶೋಧನೆಯನ್ನೇ ಜೀವನವಾಗಿಸಿಕೊಂಡಿದ್ದ ಅವರಿಗೆ ಅವರ ಧರ್ಮಪತ್ನಿ ಸದಾ ಬೆಂಬಲವಾಗಿ ನಿಂತಿದ್ದರು” ಎಂದು ಹೇಳಿದರು.

“ದೇಶದ ಪ್ರಧಾನಿ ಜವಾಹರಲಾಲ್ ನೆಹರು ಅವರು ಪ್ರತಿಯೊಬ್ಬರೂ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದ್ದರು. ಚಂದನ ಶ್ರೀ ವಿದ್ಯಾಲಯದಲ್ಲಿ ವಿಜ್ಞಾನ ಹಾಗೂ ವೈಚಾರಿಕತೆಗೆ ಹೆಚ್ಚಿನ ಒತ್ತು ನೀಡುತ್ತಿರುವುದು ಅತ್ಯಂತ ಉತ್ತಮ ಬೆಳವಣಿಗೆಯಾಗಿದೆ” ಎಂದು ಶ್ಲಾಘಿಸಿದರು.

Tags: ಚಂದನ ಶ್ರೀ ಪ್ರಶಸ್ತಿಪಟ್ಟಭದ್ರ ಹಿತಾಸಕ್ತಿಪ್ರೊ.ಸಿ.ಎನ್.ಆರ್.ರಾವ್ಬಸವಣ್ಣಮೌಢ್ಯವಿಜ್ಞಾನವಿಜ್ಞಾನ ವಿಸ್ಕೃತ ಕಾರ್ಯಕ್ರಮವೈಚಾರಿಕತೆವೈಜ್ಞಾನಿಕ ಮನೋಭಾವಸಿದ್ದರಾಮಯ್ಯ
Previous Post

ಐಶ್ವರ್ಯಾ ರೈ: “ಸಹಿಸಲು ಸಾಧ್ಯವಿಲ್ಲ” – ವಿಚ್ಛೇದನ ವದಂತಿಗಳಿಗೆ ಅಭಿಷೇಕ್ ಬಚ್ಚನ್ ಪ್ರತಿಕ್ರಿಯೆ

Next Post

ಶಾಮನೂರು ಯುಗಾಂತ್ಯ; ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಅಧಿಕಾರ ಸ್ವೀಕಾರ!

Next Post

ಶಾಮನೂರು ಯುಗಾಂತ್ಯ; ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ ಅಧಿಕಾರ ಸ್ವೀಕಾರ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS