• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ಬೆಂಗಳೂರು

K.R.Puram Files-1: ನಗರೇಶ್ವರ ನಾಗೇನಹಳ್ಳಿ ಸರ್ವೆ ನಂ.13ರಲ್ಲಿ ಕೊಳಗೇರಿ ಮನೆ ಹಂಚಿಕೆ ಅಕ್ರಮ ಆರೋಪ

ಸಾರ್ವಜನಿಕ ಪ್ರಕಟಣೆ ನೀಡದೇ, ಅರ್ಜಿ ಆಹ್ವಾನಿಸದೇ, ಆಯ್ಕೆ ಪ್ರಕ್ರಿಯೆ ನಡೆಸದೇ ಅಕ್ರಮವಾಗಿ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಮನೆ ಹಂಚಿಕೆ ಮಾಡುವುದು ಕಾನೂನುಬಾಹಿರ.

by Dynamic Leader
19/02/2026
in ಬೆಂಗಳೂರು
0
0
SHARES
2
VIEWS
Share on FacebookShare on Twitter

ಡಿ.ಸಿ.ಪ್ರಕಾಶ್, ಸಂಪಾದಕರು 

ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರ ನಗರೇಶ್ವರ ನಾಗೇನಹಳ್ಳಿ ದಿನ್ನೆ ಸರ್ವೆ ನಂ.13ರಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ PAMY (HFA) ಹಂತ–3 ಯೋಜನೆಯಡಿ ನಿರ್ಮಿಸಿರುವ 768 (ಜಿ+3) ಮನೆಗಳನ್ನು ಮಂಡಳಿಯ ನಿಯಮಗಳ ಪ್ರಕಾರ ಘೋಷಿತ ಕೊಳಗೇರಿ ನಿವಾಸಿಗಳಿಗೆ ಹಂಚಿಕೆ ಮಾಡಬೇಕು. ಕೊಳಗೇರಿ ಮಂಡಳಿ ಸ್ಥಾಪನೆಯ ಉದ್ದೇಶವೇ ಕೊಳಗೇರಿ ಜನರ ಪುನರ್ವಸತಿ ಎಂಬುದು ಮೂಲ ತತ್ವ. ಆದ್ದರಿಂದ ಯಾವುದೇ ಯೋಜನೆಯ ಫಲಾನುಭವಿಗಳೂ ಕೊಳಗೇರಿ ನಿವಾಸಿಗಳೇ ಆಗಿರಬೇಕು.

ಯೋಜನೆಯಡಿಯಲ್ಲಿ ರಾಜೀವ್‌ಗಾಂಧಿ ನಗರ (ದೇವಸಂದ್ರ)ಕ್ಕೆ 107 ಮನೆಗಳು, ಸಂಜಯ್‌ಗಾಂಧಿ ನಗರ (ದೇವಸಂದ್ರ)ಕ್ಕೆ 245 ಮನೆಗಳು, ರಾಮಮೂರ್ತಿನಗರ ಸರ್ವೆ ನಂ.85ರ ಕೊಳಗೇರಿ ಪ್ರದೇಶಕ್ಕೆ 337 ಮನೆಗಳು ಮತ್ತು ಭಟ್ಟರಹಳ್ಳಿ ಜನತಾ ಕಾಲೋನಿಗೆ 79 ಮನೆಗಳನ್ನು ಹಂಚಿಕೆ ಮಾಡುವ ಉದ್ದೇಶದಿಂದ ಮಂಡಳಿ ಡಿಪಿಆರ್ ಸಿದ್ಧಪಡಿಸಿ ಮನೆಗಳನ್ನು ನಿರ್ಮಿಸಿದೆ. ಆದರೆ, ಈ ಮನೆಗಳನ್ನು ನಿಜವಾದ ಫಲಾನುಭವಿಗಳಿಗೆ ನೀಡುವ ಉದ್ದೇಶ ಮಂಡಳಿಗೆ ಇಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಈ ಮನೆಗಳನ್ನು ಸ್ಥಳೀಯ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ ಸೂಚಿಸುವ ಕಾರ್ಯಕರ್ತರು ಮತ್ತು ಹಿಂಬಾಲಕರಿಗೆ ನೀಡಲು ಯತ್ನ ನಡೆಯುತ್ತಿದೆ ಎಂದು ಸಂಘಟನೆಗಳು ಆರೋಪಿಸಿವೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬೈರತಿ ಬಸವರಾಜ ಅವರು ತಮ್ಮ ಕಾರ್ಯಕರ್ತರಿಂದ 768 ಅರ್ಜಿಗಳನ್ನು ಸಂಗ್ರಹಿಸಿ, ಅವರನ್ನು ನಗರ ಬಡಜನರೆಂದು ತೋರಿಸಿ ಬಿಬಿಎಂಪಿ ಮಹದೇವಪುರ ವಿಭಾಗದ ಕಂದಾಯ ಅಧಿಕಾರಿಗಳಿಂದ “ವಿಶೇಷ ಆಶ್ರಯ ಸಮಿತಿ” ಹೆಸರಿನಲ್ಲಿ ಸಹಿ ಪಡೆದು ಕೊಳಗೇರಿ ಮಂಡಳಿಗೆ ಸಲ್ಲಿಸಿದ್ದಾರೆ ಎಂಬ ಆರೋಪ ಇದೆ. ಪಟ್ಟಿಯಲ್ಲಿರುವವರಲ್ಲಿ ಯಾರೂ ಘೋಷಿತ ಕೊಳಗೇರಿ ನಿವಾಸಿಗಳಲ್ಲ. ಅವರ ವಿಳಾಸ, ಜಾತಿ, ಆದಾಯ ವಿವರಗಳೂ ದಾಖಲಾಗಿಲ್ಲ ಎಂದು ಹೇಳಲಾಗಿದೆ.

ಸರ್ಕಾರ ಅಥವಾ ಕೊಳಗೇರಿ ಮಂಡಳಿ ಕೆ.ಆರ್.ಪುರಂ ಕ್ಷೇತ್ರದಲ್ಲಿ ಯಾವುದೇ ಆಶ್ರಯ ಸಮಿತಿಯನ್ನು ರಚಿಸಿಲ್ಲದಿದ್ದರೂ, ಫಲಾನುಭವಿಗಳ ಪಟ್ಟಿಯಲ್ಲಿ ಬೈರತಿ ಬಸವರಾಜರನ್ನು ಆಶ್ರಯ ಸಮಿತಿ ಅಧ್ಯಕ್ಷರಾಗಿ ಉಲ್ಲೇಖಿಸಲಾಗಿದೆ. ಈ ಪಟ್ಟಿಗೆ ಆಗಿನ ಮಂಡಳಿ ಆಯುಕ್ತ ಬಿ.ವೆಂಕಟೇಶ್ ಸಹಿ ಹಾಕಿರುವುದಾಗಿ ತಿಳಿದುಬಂದಿದ್ದು, ಇದನ್ನು ಅಧಿಕಾರ ದುರುಪಯೋಗ ಮತ್ತು ನಿಯಮ ಉಲ್ಲಂಘನೆ ಎಂದು ಸಂಘಟನೆಗಳು ಆರೋಪಿಸಿವೆ.

ಇದನ್ನೂ ಓದಿ: ಬಿಕ್ಲು ಶಿವಾ ಕೊಲೆ ಪ್ರಕರಣ: ಸುಪ್ರೀಂ ತೀರ್ಪಿಗೂ ‘ರಾಜಕೀಯ ಷಡ್ಯಂತರ’ ಅಂಕಿತ – ಆರ್.ಅಶೋಕ್ ನಡೆಗೆ ತೀವ್ರ ಟೀಕೆ!

ಸಾರ್ವಜನಿಕ ಪ್ರಕಟಣೆ ನೀಡದೇ, ಅರ್ಜಿ ಆಹ್ವಾನಿಸದೇ, ಆಯ್ಕೆ ಪ್ರಕ್ರಿಯೆ ನಡೆಸದೇ ಅಕ್ರಮವಾಗಿ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ ಮನೆ ಹಂಚಿಕೆ ಮಾಡುವುದು ಕಾನೂನುಬಾಹಿರ ಎಂದು ಪ್ರಶ್ನಿಸಲಾಗಿದೆ. ಘೋಷಿತ ಕೊಳಗೇರಿ ಜನರಿಗೆ ಮನೆ ನೀಡಬೇಕಾದರೆ ಆಶ್ರಯ ಸಮಿತಿಯ ಅಗತ್ಯವೇನು ಎಂಬ ಪ್ರಶ್ನೆಯೂ ಎದ್ದಿದೆ.

ಈ ಅಕ್ರಮಗಳ ವಿರುದ್ಧ ಶಾಸಕ ಬೈರತಿ ಬಸವರಾಜ ಹಾಗೂ ಮಂಡಳಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತರಿಗೆ ದೂರು ನೀಡಲಾಗಿದ್ದು ವಿಚಾರಣೆ ಪ್ರಗತಿಯಲ್ಲಿದೆ. ಸದರಿ ಮನೆಗಳನ್ನು ನಿಜವಾದ ಕೊಳಗೇರಿ ಬಡಜನರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ವಸತಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಹಾಗೂ ಮಂಡಳಿ ಆಯುಕ್ತರನ್ನು ಒತ್ತಾಯಿಸಿ ಫ್ರೀಡಂ ಪಾರ್ಕ್‌ನಲ್ಲಿ ಜನಶಕ್ತಿ ವೇದಿಕೆ ಮತ್ತು ಜನಶಕ್ತಿ ಮಹಿಳಾ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಮನವಿಯನ್ನು ಸ್ವೀಕರಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಮಂಡಳಿಯ ಅಧಿಕಾರಿಗಳು ಮನೆ ಹಂಚಿಕೆ ಪ್ರಕ್ರಿಯೆ ಆರಂಭಿಸುವ ಉದ್ದೇಶದಿಂದ ಡಿ.ಡಿ.ಗಳನ್ನು ಸಂಗ್ರಹಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಬಿಎ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಮನೆಗಳನ್ನು ತ್ವರಿತವಾಗಿ ಹಂಚಿಕೆ ಮಾಡಿ ಸ್ಥಳೀಯ ಶಾಸಕ ಹಾಗೂ ಅವರ ಪಕ್ಷಕ್ಕೆ ರಾಜಕೀಯವಾಗಿ ಅನುಕೂಲವಾಗುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪವೂ ಕೇಳಿಬರುತ್ತಿದೆ.

ಇದರಿಂದ ಅಸಮಾಧಾನಗೊಂಡ ಸಂಘಟನೆಗಳು ಆಶ್ರಯ ಸಮಿತಿ ಹೆಸರಿನಲ್ಲಿ ಸಿದ್ಧಪಡಿಸಿದ ಫಲಾನುಭವಿಗಳ ಪಟ್ಟಿಯನ್ನು ರದ್ದುಪಡಿಸಿ ಮನೆಗಳನ್ನು ನಿಜವಾದ ಕೊಳಗೇರಿ ಬಡಜನರಿಗೆ ನೀಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

ಕೊಳಗೇರಿ ಮಂಡಳಿಯ ಆಡಳಿತದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿರುವ ಸಂಘಟನೆಗಳು, ಅಕ್ರಮ ಹಂಚಿಕೆ ವಿರುದ್ಧದ ಪ್ರತಿಭಟನೆಗಳಿಗೆ ಸರ್ಕಾರ ಸ್ಪಂದಿಸದಿರುವುದನ್ನೂ ಖಂಡಿಸಿವೆ. ಸ್ಥಳೀಯ ಶಾಸಕರು ಸೂಚಿಸುವ ಅನುಕೂಲಸ್ಥರಿಗೆ ಮನೆ ನೀಡಲಾಗುತ್ತಿದೆ ಎಂಬ ಆರೋಪದಿಂದ ಕೊಳಗೇರಿ ಪ್ರದೇಶಗಳಲ್ಲಿ ಅಸಮಾನತೆ ಮತ್ತು ಸಾಮಾಜಿಕ ವಿಭಜನೆ ಹೆಚ್ಚುತ್ತಿದೆ. ಇದರಿಂದ ನಿಜವಾದ ಕೊಳಗೇರಿ ಜನರು ಇನ್ನೂ ಪುನರ್ವಸತಿಗೆ ಕಾಯುತ್ತಿರುವುದು ದುಃಖಕರ ವಾಸ್ತವವಾಗಿದೆ ಎಂದು ಸಂಘಟನೆಗಳು ಹೇಳಿವೆ.

Tags: Byrati BasavarajKSDBSlum Boardಅಕ್ರಮಕೆ.ಆರ್.ಪುರಂಕೊಳಗೇರಿ ಮಂಡಳಿಬೈರತಿ ಬಸವರಾಜಮನೆ ಹಂಚಿಕೆ
Previous Post

ಆರ್‌ಎಸ್‌ಎಸ್ ದೆವ್ವದಂತೆ, ಬಿಜೆಪಿ ಅದರ ನೆರಳು: ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ

Next Post

ಹಿಂದೂ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮಹಾರಾಷ್ಟ್ರದ ಮುಸ್ಲಿಂ ಸಚಿವ: ಗೋಮೂತ್ರದಿಂದ ದೇವಾಲಯ ಶುದ್ಧೀಕರಣ ವಿವಾದ

Next Post

ಹಿಂದೂ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮಹಾರಾಷ್ಟ್ರದ ಮುಸ್ಲಿಂ ಸಚಿವ: ಗೋಮೂತ್ರದಿಂದ ದೇವಾಲಯ ಶುದ್ಧೀಕರಣ ವಿವಾದ

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026

ಪಬ್-ಬಾರ್ ಪ್ರವೇಶಕ್ಕೆ ಗುರುತಿನ ಚೀಟಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

08/06/2026

ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಸಿಹಿ ಸುದ್ದಿ: ಕರ್ನಾಟಕ ಅಪಾರ್ಟ್‌ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) ಮಸೂದೆ-2025 ಶೀಘ್ರದಲ್ಲೇ ಜಾರಿ

07/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

ಆರ್‌ಎಸ್‌ಎಸ್‌ಗೆ ಕಾನೂನು ವಿನಾಯಿತಿ ಇದೆಯೇ? ದಾಖಲೆ ತೋರಿಸಿ: ಪ್ರಿಯಾಂಕ್ ಖರ್ಗೆ ಸವಾಲು

11/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS