• About
  • Advertise
  • Privacy & Policy
  • Contact
Dynamic Leader | ಡೈನಾಮಿಕ್ ಲೀಡರ್
Advertisement
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ
No Result
View All Result
Dynamic Leader | ಡೈನಾಮಿಕ್ ಲೀಡರ್
No Result
View All Result
Home ರಾಜ್ಯ

ತರಾತುರಿಯಲ್ಲಿ ಸಿಎಎ ಜಾರಿ… ಕೇಂದ್ರದಿಂದ ಜನರ ದಿಕ್ಕು ತಪ್ಪಿಸುವ ಹುನ್ನಾರ: ವೆಲ್‌ಫೇರ್ ಪಾರ್ಟಿ

by Dynamic Leader
12/03/2024
in ರಾಜ್ಯ
0
0
SHARES
0
VIEWS
Share on FacebookShare on Twitter

ಬೆಂಗಳೂರು: ಚುನಾವಣಾ ಬಾಂಡ್ ಪ್ರಕರಣವು ಕೇಂದ್ರ ಸರ್ಕಾರವನ್ನು ತೀವ್ರ ಸ್ವರೂಪದಲ್ಲಿ ಕಾಡುತ್ತಿದೆ. ತನ್ನ ರಕ್ಷಣೆಗಾಗಿ ತರಾತುರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಕೇಂದ್ರ ಸರಕಾರ ಜಾರಿಗೆ ತಂದಿದೆ. ಸರಕಾರದ ಈ ನಡೆಯು ಜನರ ಗಮನ ಬೇರೆಡೆಗೆ ಸೆಳೆಯುವ ಹುನ್ನಾರವಾಗಿದೆ ಎಂದು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ತಾಹೇರ್ ಹುಸೇನ್, “ಈಗಿರುವ ಕೇಂದ್ರ ಸರ್ಕಾರಕ್ಕೆ ಈ ದೇಶದ ಜನರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ ಎಂಬುದಕ್ಕೆ ಹಲವಾರು ನಿದರ್ಶನಗಳಿವೆ. ಸಿಎಎ ಜಾರಿಗೆ ತರುವ ಮೂಲಕ ಹೊರದೇಶದವರನ್ನು ನಮ್ಮ ದೇಶದಲ್ಲಿ ತುಂಬಿಸಲು ಪ್ರಯತ್ನಿಸುತ್ತಿದ್ದಾರೆ.

ಇಲ್ಲಿನ ಜನಸಾಮಾನ್ಯರ ನೈಜ ಸಮಸ್ಯೆಗಳ ಕಡೆ ಗಮನ ಹರಿಸುತ್ತಿಲ್ಲ. ರೈತರ ಸಮಸ್ಯೆಗಳನ್ನು ಪರಿಹರಿಸುತ್ತಿಲ್ಲ. ಕೃಷಿ ಕಾಯ್ದೆ ಹೇರಿ ಅವರನ್ನೂ ಕಾಡಲಾಗುತ್ತಿದೆ. ರೈತರು ಬೀದಿಗಿಳಿದಿದ್ದಾರೆ. ನಿರುದ್ಯೋಗಿಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ‌. ಗ್ರಹಬಳಕೆಯ ಆಹಾರ ವಸ್ತುಗಳ ದರಗಳ ಏರಿಕೆಯಿಂದ ಜನರು ತತ್ತರಿಸುತ್ತಿದ್ದಾರೆ. ಈ ಪ್ರಮುಖ ಸಮಸ್ಯೆಗಳ ಕಡೆಗೆ ಗಮನ ಹರಿಸುತ್ತಿಲ್ಲ.

ಕೇಂದ್ರದ ವೈಫಲ್ಯದ ವಿರುದ್ಧ ಜನ ರೋಸಿ ಹೋಗಿದ್ದಾರೆ. ಜೊತೆಗೆ ಬಿಜೆಪಿ ಚುನಾವಣಾ ಬಾಂಡ್ ಪ್ರಕರಣದಿಂದ ಸಂಕಷ್ಟದಲ್ಲಿದೆ.  ಹೀಗಿರುವಾಗ ಚುನಾವಣೆ ಆಸನ್ನವಾಗಿರುವ ಈ ಹೊತ್ತಿಗೆ ಸರಕಾರದ ನಡೆಯು ಬಹಳಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ. ಜನರು ಇದನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

Tags: CAAWelfare Partyಕೃಷಿ ಕಾಯ್ದೆಚುನಾವಣಾ ಬಾಂಡ್ನಿರುದ್ಯೋಗಪೌರತ್ವ ತಿದ್ದುಪಡಿ ಕಾಯ್ದೆಬಿಜೆಪಿರೈತರುವೆಲ್‌ಫೇರ್ ಪಾರ್ಟಿಸಿಎಎ
Previous Post

ಪೌರತ್ವ ತಿದ್ದುಪಡಿ ಕಾಯ್ದೆ; ಜನರ ಹಕ್ಕುಗಳನ್ನು ಕಸಿದುಕೊಳ್ಳುವ “ಗೇಮ್”: ಮಮತಾ ಬ್ಯಾನರ್ಜಿ

Next Post

ಯಾದಗಿರಿ: ಸಾವಿತ್ರಿಬಾಯಿ ಪುಲೆ ಅವರ 127ನೇ ಪುಣ್ಯಸ್ಮರಣೆ ಅಂಗವಾಗಿ ‘ಸಂವಿಧಾನ ಅರಿವಿನ ಯಾನ’ಕ್ಕೆ ಚಾಲನೆ!

Next Post

ಯಾದಗಿರಿ: ಸಾವಿತ್ರಿಬಾಯಿ ಪುಲೆ ಅವರ 127ನೇ ಪುಣ್ಯಸ್ಮರಣೆ ಅಂಗವಾಗಿ 'ಸಂವಿಧಾನ ಅರಿವಿನ ಯಾನ'ಕ್ಕೆ ಚಾಲನೆ!

Stay Connected test

  • 24k Followers
  • 99 Subscribers
  • Trending
  • Comments
  • Latest

ಜಾತಿಯೇ ಇಲ್ಲದಿದ್ದರೆ, ನೀವೆಲ್ಲರೂ ಯಾರು? – ಫುಲೆ ಚಿತ್ರದ ವಿಚಾರವಾಗಿ ಅನುರಾಗ್ ಗರಂ!

18/04/2025

Harvest Festival: ಕೊತ್ತನೂರು CSI ಸಭೆಯಲ್ಲಿ ಅದ್ದೂರಿಯಾಗಿ ನಡೆದ ಸುಗ್ಗಿ ಉತ್ಸವ!

13/10/2025

ಕೆ.ಆರ್.ಪುರಂ ಕ್ಷೇತ್ರಕ್ಕೆ ಬಂದಿದ್ದ ಸುಮಾರು 5000 ಸಾವಿರ ಕೋಟಿ ರೂ.ಗಳು ಏನಾದವು? ಎಂದು ನನಗೆ ಯಕ್ಷ ಪ್ರಶ್ನೆಯಾಗಿದೆ: ಸಚಿವ ಬೈರತಿ ಸುರೇಶ್

28/10/2025
ಚುನಾವಣಾ ಅಭ್ಯರ್ಥಿಗಳು ಇನ್ನು ಮುಂದೆ ಗುಂಪು ಸೇರಿಸಿ ಮೆರವಣಿಗೆ ನಡೆಸಿ ಅರ್ಜಿಗಳನ್ನು ಸಲ್ಲಿಸಬೇಕಾಗಿಲ್ಲ. ಆನ್ಲೈನ್ನಲ್ಲಿ ನಾಮಪತ್ರಗಳನ್ನು ಸಲ್ಲಿಸುವ ಸಲುವಾಗಿ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.

ಇನ್ನು ಮುಂದೆ ನಾಮಪತ್ರ ಸಲ್ಲಿಕೆ ಆನ್‌ಲೈನ್‌ನಲ್ಲಿ ಮಾತ್ರ; ಗದ್ದಲಕ್ಕೆ ಅಂತ್ಯ ಹಾಡಿದ ಚುನಾವಣಾ ಆಯೋಗ!

24/07/2025

ಫಿಪ ವಿಶ್ವಕಪ್ ಫುಟ್ ಬಾಲ್ ಫೈನಲ್:

0

‘ಶ್ರೀ.ಸಿದ್ದಗಂಗಾ ಸಿರಿ ಪ್ರಶಸ್ತಿ’

0

ಅಖಿಲ ಭಾರತ ಹಿಂದೂ ಮಹಾಸಭಾ ಹೆಸರಿನಲ್ಲಿ ಪುಂಡಾಟಿಕೆ!

0

ಕೊರೊನಾ ಆರ್ಭಟಕ್ಕೆ ಚೀನಾ ತತ್ತರ…!

0

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026

ಮತಗಳು ಬೇಕು, ನಾಯಕತ್ವ ಬೇಡವೇ? INDIA ಒಕ್ಕೂಟ, ರಾಹುಲ್ ಗಾಂಧಿಯ ಭಾಷಣ ಮತ್ತು ಪ್ರಾತಿನಿಧ್ಯದ ರಾಜಕೀಯದ ಉತ್ತರಿಸಲಾಗದ ಪ್ರಶ್ನೆಗಳು.

16/06/2026

ಶಬರಿಮಲೆ: ದಪ್ಪ ಲೇಪಿತ ಚಿನ್ನವನ್ನು ಕದ್ದು ತೆಳುವಾದ ಲೇಪನ ಮಾಡುವ ಮೂಲಕ ವಂಚನೆ; ಪ್ರಯೋಗಾಲಯ ಪರೀಕ್ಷೆಯಲ್ಲಿ ಆಘಾತಕಾರಿ ಸಂಗತಿ

12/06/2026
Dynamic Leader | ಡೈನಾಮಿಕ್ ಲೀಡರ್

DYNAMIC LEADER is a popular online Kannada newsportal, going source for technical and digital content for its influential audience around the globe.

Follow Us

Browse by Category

  • ಆರೋಗ್ಯ
  • ಇತರೆ ಸುದ್ಧಿಗಳು
  • ಉದ್ಯೋಗ
  • ಕ್ರೀಡೆ
  • ಕ್ರೈಂ ರಿಪೋರ್ಟ್ಸ್
  • ದೇಶ
  • ಬೆಂಗಳೂರು
  • ರಾಜಕೀಯ
  • ರಾಜ್ಯ
  • ಲೇಖನ
  • ವಿದೇಶ
  • ಶಿಕ್ಷಣ
  • ಸಂಪಾದಕೀಯ
  • ಸಿನಿಮಾ

You can reach us via email or phone.

ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com

Recent News

“ಇಸ್ಲಾಮಾಬಾದ್ ತಿಳುವಳಿಕೆ ಒಪ್ಪಂದ”ಕ್ಕೆ ಸಹಿ: ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಹಾರ್ಮುಜ್ ಜಲಸಂಧಿ ಪುನಃ ತೆರೆಯಲು ಒಪ್ಪಿಗೆ.

18/06/2026

“ಪ್ರಶ್ನೆ ಪತ್ರಿಕೆ ಸೋರಿಕೆ ವಿದ್ಯಾರ್ಥಿಗಳ ಕನಸುಗಳನ್ನು ನುಚ್ಚುನೂರಾಗಿಸುವ ಸಾಧನವಾಗಿದೆ” – ರಾಹುಲ್ ಗಾಂಧಿ

16/06/2026
  • Site Terms
  • Privacy
  • Advertisement
  • Cookies Policy
  • Contact Us

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS

No Result
View All Result
  • ಮುಖಪುಟ
  • ಬೆಂಗಳೂರು
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಶಿಕ್ಷಣ
  • ಉದ್ಯೋಗ
  • ಆರೋಗ್ಯ
  • ಲೇಖನ
  • ಸಂಪಾದಕೀಯ

Copyrights © 2019 - 26 by Dynamic Leader | ಡೈನಾಮಿಕ್ ಲೀಡರ್ | Designed by: DIGICUBE SOLUTIONS